ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪೋಷಕರು ಮತ್ತು ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಿಸಲು ಮುಂದಾಗಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಂತದಿಂದಲೇ ಮಕ್ಕಳಿಗೆ ಇಂಗ್ಲಿಷನ್ನು ಒಂದು ಭಾಷೆಯನ್ನಾಗಿ ಕಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆ ತರುವುದರ ಕಡೆಗೆ ಇದೊಂದು ಮಹತ್ವ ಹೆಜ್ಜೆ ಆಗಲಿದೆ. ‘ಕನ್ನಡ ಭಾಷೆಯ ಉಳಿವು ಸರ್ಕಾರದ ಆದ್ಯತೆ. ಯಾವುದೇ ಕಾರಣಕ್ಕೂ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ. ಅವುಗಳನ್ನು ಮುಂದುವರಿಸುವ ಜತೆಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು.

‘ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ವಾತಾವರಣ ಸೃಷ್ಟಿ ಆಗಬೇಕಿದೆ. ಇದಕ್ಕಾಗಿ ಮೂಲಸೌಕರ್ಯ ಮತ್ತು ಬೋಧನಾ ಮಟ್ಟವನ್ನು ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಏರಿಸುತ್ತೇವೆ. ಇವೆಲ್ಲ ಅಂಶಗಳನ್ನು ಒಳಗೊಂಡ ಹೊಸ ಕಾರ್ಯಕ್ರಮವನ್ನು ಬಜೆಟ್‌ನಲ್ಲಿ ಪ್ರಕಟಿಸುತ್ತೇವೆ’ ಎಂದು ಅವರು ಹೇಳಿದರು.

ಖಾಸಗಿ ಶಾಲೆಗಳು ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿದರೆ, ಮಾನ್ಯತೆ ರದ್ದು ಮಾಡಲಾಗುವುದು. ಅಲ್ಪಸಂಖ್ಯಾತರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರು ಏನು ಮಾಡುತ್ತಿದ್ದಾರೆ ಎಂಬ ವಿಚಾರ ಗೊತ್ತಿದೆ ಎಂದೂ ಅವರು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಮಾತನಾಡಿ, ಸರ್ಕಾರಿ ಶಾಲೆಗಳಿಗಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಶಾಲೆಗೆ ಐದು ಅಥವಾ ಆರು ವಿದ್ಯಾರ್ಥಿಗಳು ಬಂದರೆ ಏನು ಮಾಡುವುದು. ಇದರಿಂದ ಸಾಕಷ್ಟು ಶಾಲೆಗಳು ಮುಚ್ಚುವ ಹಂತ ತಲುಪಿವೆ ಎಂದು ಹೇಳಿದರು.

ಜಿಲ್ಲಾ ಉದ್ಯೋಗ ಸಮಿತಿ:

ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಮಟ್ಟದಲ್ಲಿ ಉದ್ಯೋಗ ಸಮಿತಿಗಳನ್ನು ರಚಿಸಲು ಅವರು ಸೂಚನೆ ನೀಡಿದರು. ಈ ಸಮಿತಿಯು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ, ಎಸ್ಪಿ, ಕೈಗಾರಿಕೆ ಇಲಾಖೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡಿರಬೇಕು. ಸಮಿತಿಯು ಜಿಲ್ಲೆಗಳಲ್ಲಿರುವ ಉದ್ಯಮಗಳ ಮುಖ್ಯಸ್ಥರನ್ನು ಸಂಪರ್ಕಿಸಿ ಖಾಲಿ ಹುದ್ದೆಗಳ ಮಾಹಿತಿಯನ್ನು ಸಂಗ್ರಹಿಸಿ ಮಾತುಕತೆ ನಡೆಸಬೇಕು ಎಂದರು. ಕೌಶಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಅದನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.

Please follow and like us:
0
http://bp9news.com/wp-content/uploads/2018/06/2-hdk-1527318093.jpghttp://bp9news.com/wp-content/uploads/2018/06/2-hdk-1527318093-150x150.jpgPolitical Bureauಪ್ರಮುಖರಾಜಕೀಯImportant Step by CM Kumaraswamy In Education : LKG and English in government school !!!ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪೋಷಕರು ಮತ್ತು ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಿಸಲು ಮುಂದಾಗಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಂತದಿಂದಲೇ ಮಕ್ಕಳಿಗೆ ಇಂಗ್ಲಿಷನ್ನು ಒಂದು ಭಾಷೆಯನ್ನಾಗಿ ಕಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆ ತರುವುದರ ಕಡೆಗೆ ಇದೊಂದು ಮಹತ್ವ ಹೆಜ್ಜೆ ಆಗಲಿದೆ. ‘ಕನ್ನಡ ಭಾಷೆಯ ಉಳಿವು ಸರ್ಕಾರದ...Kannada News Portal