ಬೆಂಗಳೂರು : ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಅವರ ಆಟ ನಡೆಯಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೆಗಾಲದ ನ್ಯಾಷನಲ್ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಈ ವಿಚಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಲ್ಲಿ ಇರುವ ಮಂತ್ರಿ ಅನಂತಕುಮಾರ್ ಹೆಗ್ಡೆ ಸಂವಿಧಾನ ಬದಲಿಸುತ್ತೆನೆ ಎಂದು ಹೇಳುತ್ತಾರಲ್ಲ ಅವರು ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಯೋಗ್ಯತೆ ಇಲ್ಲ. ಸಂವಿಧಾನ ಬದಲು ಮಾಡಿದರೆ ದೇಶದಲ್ಲಿ ರಕ್ತ ಪಾತ ಹರಿಯುತ್ತದೆ. ಹಾಗೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆದ ಮೇಲೆ ದಲಿತರ ಮೇಲೆ ದೌರ್ಜನ್ಯ ಶೇ 38 ಹೆಚ್ಚಳವಾಗಿದೆ ಎಂದು ಗುಡುಗಿದ್ದಾರೆ.

ಇನ್ನು ಅನಂತಕುಮಾರ್ ಹೆಗ್ಡೆಯ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ಅಮಿತ್ ಶಾ ಹೇಳುತ್ತಾರೆ. ನೀವೆ ಹೇಳಿ ಇವರು ಡೋಂಗಿಗಳು ಹೌದೋ ಅಲ್ಲವೊ ಎಂದು ಪ್ರಶ್ನಿಸಿದರು. ಬಿಜೆಪಿ ಅವರಿಗೆ ಜಾತ್ಯಾತೀತ ತತ್ವದ ಬಗ್ಗೆ ನಂಬಿಕೆ ಇಲ್ಲ. ಅವರು ಕೋಮುವಾದಿಗಳು. ವಿಜಯ್ ಮಲ್ಯ, ನೀರವ್ ಮೋದಿ ದೇಶ ಕೊಳ್ಳೆ ಹೊಡೆದು ಹೋಗುವಾಗ ಪ್ರಧಾನಿ ಮೋದಿ ಎಲ್ಲಿ ಹೋಗಿದ್ದರು. ದೇಶ ಆಳಲು 56 ಇಂಚಿನ ಎದೆ ಅಲ್ಲ, ವಿಶಾಲವಾದ ಹೃದಯ ಬೇಕು. ಬಾಡಿ ಬಿಲ್ಡರ್ಗೂ ಮೋದಿಯಂತೆ 56 ಇಂಚಿನ ಎದೆ ಇರುತ್ತದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತೈಲ, ಅಡುಗೆ ಅನಿಲ ಬೆಲೆ ಎಷ್ಟಿತ್ತು, ಬಿಜೆಪಿ ಸರ್ಕಾರ ಬಂದ ಮೇಲೆ ಎಷ್ಟಾಗಿದೆ ಇದೆ ಏನು ಅಚ್ಚೆ ದಿನ್, ಮನ್ ಕಿ ಬಾತ್ ಬದಲು ಕಾಮ್ ಕಿ ಬಾತ್ ಹೇಳಿ ಎಂದರು. ಕೊಳ್ಳೇಗಾಲದ ಜನತೆ ಎ.ಆರ್.ಕೃಷ್ಣಮೂರ್ತಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದ ಅವರು, ಬಿಜೆಪಿ ಪಕ್ಷ ಜಾತಿ- ಜಾತಿ ನಡುವೆ ಬೆಂಕಿ ಹಚ್ಚುವ ಪಕ್ಷ, ಡಾ.ಅಂಬೇಡ್ಕರ್ ಸಾಹೇಬರು ರಚಿಸಿದ ಸಂವಿದಾನ ಬದಲಿಸಲು ಹುನ್ನಾರ ನಡೆಸಿದೆ ದಲಿತರ ಹಕ್ಕುಗಳಿಗೆ ಚ್ಯುತಿ ತರಲು ಹೊರಟಿದ್ದಾರೆ ಆದ್ದರಿಂದ ಮತದಾರರು ಬಿ.ಜೆ.ಪಿ ತಿರಸ್ಕರಿಸಬೇಕು ಬಿ.ಎಸ್.ಬಿ ಅಭ್ಯರ್ಥಿ ಮಹೇಶ್ ಗೆದ್ದರು ಇವರು ರಾಜ್ಯ ಮಟ್ಟದಲ್ಲಿ ಏನು ಸಾಧಿಸಲು ಸಾಧ್ಯವಿಲ್ಲ ಎಂದರು.

Please follow and like us:
0
http://bp9news.com/wp-content/uploads/2018/03/cm-BP9-News-Web-Portal.jpeghttp://bp9news.com/wp-content/uploads/2018/03/cm-BP9-News-Web-Portal-150x150.jpegPolitical Bureauಚಾಮರಾಜನಗರಪ್ರಮುಖರಾಜಕೀಯIs the sun born to the east? So again we will be back to power !!! : CMಬೆಂಗಳೂರು : ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಅವರ ಆಟ ನಡೆಯಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೆಗಾಲದ ನ್ಯಾಷನಲ್ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಈ ವಿಚಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಇರುವ ಮಂತ್ರಿ...Kannada News Portal