ಬೆಂಗಳೂರು: ಹಣಕಾಸು ಇಲಾಖೆ ಸೇರಿದಂತೆ ಪ್ರಮುಖ ಖಾತೆಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು, ರಾಜಿ ಮಾಡಿಕೊಂಡ ಕಾಂಗ್ರೆಸ್ ಇದೀಗ, ಪೂರ್ಣ ಅವಧಿಯ ಮುಖ್ಯಮಂತ್ರಿ ಹುದ್ದೆಯನ್ನೂ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಅಲ್ಲದೇ 2019ರ ಲೋಕಸಭೆ ಚುನಾವಣೆಯವರೆಗೂ ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ನಿರ್ಧರಿಸಿವೆ.

ಶುಕ್ರವಾರ ಹೋಟೆಲ್ ಅಶೋಕದಲ್ಲಿನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮುಂದಿನ 5 ವರ್ಷಗಳ ಕಾಲ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಘೋಷಿಸಿದರು.

ಅಲ್ಲದೆ ಜೂ. 6ಕ್ಕೆ ಎಲ್ಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. 2019ರಲ್ಲಿ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆದಿದ್ದರೂ ಜೆಡಿಎಸ್ ಗೆ ಏಕೆ ಇಷ್ಟು ಮಣೆ ಹಾಕುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ಹೈಕಮಾಂಡ್ಗೆ ರಾಜ್ಯದಲ್ಲಿ ಕಾಂಗ್ರೆಸ್ ನವರು ಮುಖ್ಯಮಂತ್ರಿ ಆಗುತ್ತಾರೋ ಇಲ್ಲವೋ ಬೇಡವಾಗಿದೆ. ಅವರಿಗೆ ಬೇಕಿರುವುದು 2019ರಲ್ಲಿ ಮೋದಿಯನ್ನು ಅಣಿದು ರಾಹುಲ್ ಪ್ರಧಾನಿಯಾಗುವುದು. ಆ ಮೂಲಕ ದೇಶದಲ್ಲಿ ಕೆಳೆದು ಕೊಂಡಿರುವ ಎಲ್ಲಾ ರಾಜ್ಯಗಳನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಪಡೆದು ಕೊಳ್ಳುವುದಾಗಿದೆ ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ದಟ್ಟವಾಗಿಯೇ ಕೇಳಿಬರುತ್ತಿದೆ.

Please follow and like us:
0
http://bp9news.com/wp-content/uploads/2018/06/port-1.jpghttp://bp9news.com/wp-content/uploads/2018/06/port-1-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯJDS has shaken his head in the state for wanting to defeat Modi in 2019ಬೆಂಗಳೂರು: ಹಣಕಾಸು ಇಲಾಖೆ ಸೇರಿದಂತೆ ಪ್ರಮುಖ ಖಾತೆಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು, ರಾಜಿ ಮಾಡಿಕೊಂಡ ಕಾಂಗ್ರೆಸ್ ಇದೀಗ, ಪೂರ್ಣ ಅವಧಿಯ ಮುಖ್ಯಮಂತ್ರಿ ಹುದ್ದೆಯನ್ನೂ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಅಲ್ಲದೇ 2019ರ ಲೋಕಸಭೆ ಚುನಾವಣೆಯವರೆಗೂ ಮೈತ್ರಿ ಮುಂದುವರಿಸಲು ಉಭಯ ಪಕ್ಷಗಳು ನಿರ್ಧರಿಸಿವೆ. ಶುಕ್ರವಾರ ಹೋಟೆಲ್ ಅಶೋಕದಲ್ಲಿನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮುಂದಿನ 5 ವರ್ಷಗಳ ಕಾಲ ಎಚ್.ಡಿ. ಕುಮಾರಸ್ವಾಮಿ ಅವರೇ...Kannada News Portal