ಮಡಿಕೇರಿ :ಮಡಿಕೇರಿ ತಾಲ್ಲೂಕು ಕಛೇರಿಯಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆಯೆಂದು ಆರೋಪಿಸಿರುವ ತಾಲ್ಲೂಕು ಬಿಜೆಪಿ ಸಮಿತಿ, ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿ ಜು.16 ರಂದು ಪಕ್ಷದ ವತಿಯಿಂದ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮನಾತನಾಡಿದ ಬಿಜೆಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಜನ ಸಾಮಾನ್ಯರ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಕಿಶೋರ್ ಕುಮಾರ್, ಕಂದಾಯ ಇಲಾಖೆಯಲ್ಲಿ ಅನೇಕ ಕಡತಗಳು ಬಾಕಿ ಉಳಿದಿವೆ ಎಂದರು.

ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ದೃಢೀಕರಣ ಪತ್ರವನ್ನು ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಆರ್‍ಟಿಸಿಯಲ್ಲಿ ಕೊಡಗಿನಲ್ಲಿ ಬೆಳೆಯುವ ಶಾಶ್ವತ ಬೆಳೆಗಳಾದ ಭತ್ತ, ಕಾಫಿ ಮತ್ತು ಕಾಳು ಮೆಣಸನ್ನು ಸಮರ್ಪಕ ರೀತಿಯಲ್ಲಿ ನಮೂದಿಸದೆ ಇರುವುದರಿಂದ ಸಹಕಾರಿ ಸಂಘ ಹಾಗೂ ಬ್ಯಾಂಕ್‍ಗಳಲ್ಲಿ ರೈತರಿಗೆ ಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕು ಕಛೇರಿಯಲ್ಲಿ ಕೆಲವು ಅಧಿಕಾರಿಗಳು ಕಳೆದ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಇವರಿಂದ ನಿರ್ಲಕ್ಷ್ಯ ಮನೋಭಾವನೆ ಹೆಚ್ಚಾಗಿದೆ. ಜನಸಾಮಾನ್ಯರ ಅರ್ಜಿ ವಿಲೇವಾರಿ ಸಂದರ್ಭ ಕಂಪ್ಯೂಟರ್ ದುರಸ್ತಿಯಲ್ಲಿದೆ ಎನ್ನುವ ನೆಪವೊಡ್ಡಿ ಸತಾಯಿಸಲಾಗುತ್ತಿದೆ. ಅಕ್ರಮ ಸಕ್ರಮ ಸಮಿತಿಯ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸದೆ ಇರುವುದರಿಂದ ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ ಎಂದು ಕಿಶೋರ್ ಕುಮಾರ್ ಆರೋಪಿಸಿದರು.

ಅತಿವೃಷ್ಟಿಯಿಂದ ರಸ್ತೆಗಳಲ್ಲೆ ಮಳೆ ನೀರು ಹರಿಯುತ್ತಿದ್ದರು, ಲೋಕೋಪಯೋಗಿ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿಗಳ ಬಳಿ ಮಳೆ ಹಾನಿ ಪರಿಹಾರದ ಅನುದಾನವಿದ್ದರು ಖರ್ಚು ಮಾಡದೆ ಇರುವುದರಿಂದ ಮತ್ತಷ್ಟು ಅನುದಾನವನ್ನು ಸರ್ಕಾರದಿಂದ ಪಡೆಯಲು ಸಾಧ್ಯವಾಗುತ್ತಿಲ್ಲವೆಂದು ಕಿಶೋರ್ ಕುಮಾರ್ ಆರೋಪಿಸಿದರು. ಜಿಲ್ಲಾಡಳಿತ ಮತ್ತು ಕಂದಾಯ ಅಧಿಕಾರಿಗಳ ವಿರುದ್ಧ ಜುಲೈ 16 ರಂದು ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.

ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ಈ ಹಿಂದೆ ನಗರಸಭೆ ಕಛೇರಿಗಳ ಅವ್ಯವಸ್ಥೆ ವಿರುದ್ಧ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿತ್ತಾದರು, ಇದೀಗ ಮತ್ತೆ ಯಾವುದೇ ಕೆಲಸ ಕಾರ್ಯಗಳು ನಡೆಯದೆ ಜನ ಸಾಮಾನ್ಯರಿಂದ ದೂರುಗಳು ಕೇಳಿ ಬಂದಿದೆ. ನಗರಸಭೆಯ ಆಡಳಿತ ವ್ಯವಸ್ಥೆ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳದಿದ್ದಲ್ಲಿ ಮತ್ತೆ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಹೇಶ್ ಜೈನಿ ಎಚ್ಚರಿಕೆ ನೀಡಿದರು.

 

 

 

Please follow and like us:
0
http://bp9news.com/wp-content/uploads/2018/07/Z-BJP-1.jpghttp://bp9news.com/wp-content/uploads/2018/07/Z-BJP-1-150x150.jpgBP9 Bureauಕೊಡಗುಪ್ರಮುಖಮಡಿಕೇರಿ :ಮಡಿಕೇರಿ ತಾಲ್ಲೂಕು ಕಛೇರಿಯಲ್ಲಿ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆಯೆಂದು ಆರೋಪಿಸಿರುವ ತಾಲ್ಲೂಕು ಬಿಜೆಪಿ ಸಮಿತಿ, ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿ ಜು.16 ರಂದು ಪಕ್ಷದ ವತಿಯಿಂದ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮನಾತನಾಡಿದ ಬಿಜೆಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಜನ ಸಾಮಾನ್ಯರ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲವೆಂದು...Kannada News Portal