ಮಡಿಕೇರಿ: ಈ ಬಾರಿ ಕೂಡ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಪ್ಪಚ್ಚುರಂಜನ್ ಹೇಳಿದ್ದಾರೆ.ಮಡಿಕೇರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರ ಪರ ಭರ್ಜರಿ ರೋಡ್ ಶೋ ನಡೆಸಿದರು.

ನಗರದ ಬನ್ನಿಮಂಟಪದ ಬಳಿಯಿಂದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆಯಲ್ಲೇ ತೆರಳಿದ ಶಾಸಕ ಅಪ್ಪಚ್ಚುರಂಜನ್ ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಸಂತೆಯಲ್ಲಿ ವರ್ತಕರು ಹಾಗೂ ಗ್ರಾಹಕರ ಬಳಿ ಮತ ಯಾಚಿಸಿದರು. ನಂತರ ಬಸ್ ನಿಲ್ದಾಣದವರೆಗೆ ಅಂಗಡಿ, ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿದರು. ಬೀದಿ ಬದಿಯ ವ್ಯಾಪಾರಿಗಳ ಬಳಿಯೂ ಮತ ಕೇಳಿದರು.

ಮತಯಾಚನೆ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅಪ್ಪಚ್ಚು ರಂಜನ್ ಈ ಬಾರಿ ಕೂಡ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳ ಮನೆ ಮನೆಗಳಿಗೆ ತಾವು ಭೇಟಿ ನೀಡಿ ಮತಯಾಚಿಸಿದ್ದು, ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರ ಸ್ಪಂದನೆಯಿದ್ದರೆ ನನ್ನ ಗೆಲುವು ನಿಶ್ಚಯವೆಂದ ಅವರು ಜನಾಭಿಪ್ರಾಯವೇ ಬಿಜೆಪಿಗೆ ವರ ಎಂದು ಅಭಿಪ್ರಾಯಪಟ್ಟರು.

ಪ್ರಚಾರದ ವೇಳೆ ಶೇ.70 ರಷ್ಟು ಮಂದಿ ನನಗೆ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ ಅಪ್ಪಚ್ಚುರಂಜನ್ ರಾಜ್ಯದಲ್ಲಿ ಬಿಜೆಪಿ 150 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಖಚಿತವೆಂದರು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ, ಬಿಜೆಪಿ ನಗರಾಧ್ಯಕ್ಷರಾದ ಮಹೇಶ್‍ಜೈನಿ, ಪ್ರಧಾನ ಕಾರ್ಯದರ್ಶಿ ಉಮೇಶ್ ಸುಬ್ರಮಣಿ, ಮನು ಮಂಜುನಾಥ್, ತಾಲ್ಲೂಕು ಯುವ ಮೋರ್ಚಾದ ಅಧ್ಯಕ್ಷ ಧನಂಜಯ್, ನಗರಸಭೆಯ ಉಪಾಧ್ಯಕ್ಷರಾದ ಟಿ.ಎಸ್.ಪ್ರಕಾಶ್, ಸದಸ್ಯರಾದ ಪಿ.ಡಿ.ಪೊನ್ನಪ್ಪ, ಕೆ.ಎಸ್.ರಮೇಶ್, ಬಜರಂಗದಳದ ಜಿಲ್ಲಾ ಸಂಚಾಲಕರಾದ ಅಜಿತ್ ಕುಮಾರ್, ನಗರಸಭೆಯ ಮಾಜಿ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳು ರೋಡ್ ಶೋ ದಲ್ಲಿ ಪಾಲ್ಗೊಂಡಿದ್ದರು.

Please follow and like us:
0
http://bp9news.com/wp-content/uploads/2018/05/Z-APPACHU-RANJAN-4-1.jpghttp://bp9news.com/wp-content/uploads/2018/05/Z-APPACHU-RANJAN-4-1-150x150.jpgBP9 Bureauಕೊಡಗುರಾಜಕೀಯಮಡಿಕೇರಿ: ಈ ಬಾರಿ ಕೂಡ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಪ್ಪಚ್ಚುರಂಜನ್ ಹೇಳಿದ್ದಾರೆ.ಮಡಿಕೇರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರ ಪರ ಭರ್ಜರಿ ರೋಡ್ ಶೋ ನಡೆಸಿದರು. ನಗರದ ಬನ್ನಿಮಂಟಪದ ಬಳಿಯಿಂದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆಯಲ್ಲೇ ತೆರಳಿದ ಶಾಸಕ ಅಪ್ಪಚ್ಚುರಂಜನ್ ಮತ್ತೊಮ್ಮೆ ತಮ್ಮನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಸಂತೆಯಲ್ಲಿ ವರ್ತಕರು ಹಾಗೂ...Kannada News Portal