ಮಡಿಕೇರಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಬ್ಬೆಟ್ಟಗೇರಿ, ದೇವಸ್ತೂರು, ತಂತಿಪಾಲ, ಕಾಲೂರು, ಕುಂದರಕೊಡಿ ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ  ಮಾಡಿದರು.

ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಎಂಜಿನಿಯರ್ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪೊನ್ನುಸ್ವಾಮಿ, ಅವರು ಅತಿವೃಷ್ಟಿಯಿಂದ ಹಾನಿಯಾಗಿರುವ ಬೆಳೆ, ಮನೆ, ಅಂಗನವಾಡಿ, ಶಾಲಾ ಕಟ್ಟಡಗಳ ಹಾನಿ  ಪ್ರದೇಶಗಳನ್ನು ವೀಕ್ಷಿಸಿದರು. ಹೆಬ್ಬೆಟ್ಟಗೇರಿ ಬಳಿ ಭೂ ಕುಸಿತವಾಗಿರುವುದನ್ನು ಪರಿಶೀಲಿಸಿದರು.

ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ ಕೇಂದ್ರ ತಂಡವು ಈಗಾಗಲೇ ಎರಡು ದಿನಗಳಿಂದ ತೀವ್ರ ಅತಿವೃಷ್ಟಿ ಪ್ರದೇಶಗಳಿಗೆ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದ್ದು, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿಸಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಜೊತೆಗೂಡಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕೃತಿ ವಿಕೋಪದದಿಂದ ಉಂಟಾಗಿರುವ ನಷ್ಟ ಸಂಬಂಧ ಹೆಚ್ಚಿನ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಪ್ರಕೃತಿ ವಿಕೋಪದಿಂದ ಅಪಾರ ನಷ್ಟ ಉಂಟಾಗಿದ್ದು, ಈ ಸಂಬಂಧ ಕೇಂದ್ರ ತಂಡಕ್ಕೆ ಇಲ್ಲಿನ ನಷ್ಟದ ಬಗ್ಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ನೀಡುವ ಕೆಲಸ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಕೇಂದ್ರ ತಂಡವು ಜಿಲ್ಲೆಯ ನಾನಾ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದರು.  ಕೇಂದ್ರ ತಂಡದ ಅಧಿಕಾರಿಗಳು ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಶಾಸಕ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಲಿಂಗರಾಜ, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರ್ ಕುಸುಮ, ಎಂಜಿನಿಯರ್‍ಗಳು ಇತರರು ಹಾಜರಿದ್ದರು.

 

 

 

 

Please follow and like us:
0
http://bp9news.com/wp-content/uploads/2018/09/Z-CENTRL-TEAM-1-1.jpghttp://bp9news.com/wp-content/uploads/2018/09/Z-CENTRL-TEAM-1-1-150x150.jpgBP9 Bureauಕೊಡಗುಪ್ರಮುಖಮಡಿಕೇರಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಬ್ಬೆಟ್ಟಗೇರಿ, ದೇವಸ್ತೂರು, ತಂತಿಪಾಲ, ಕಾಲೂರು, ಕುಂದರಕೊಡಿ ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ  ಮಾಡಿದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ ಜಂಟಿ...Kannada News Portal