ಮಡಿಕೇರಿ  : ಹೊಸ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕಗ್ಗಂಟು ನಿಲ್ಲುವಂತೆ ಕಾಣುತ್ತಿಲ್ಲ. ಹಲವು ಸಮುದಾಯದವರು ತಮಗೆ ಡಿಸಿಎಂ ಸ್ಥಾನಕ್ಕೆ ಆಗ್ರಹಿಸುತ್ತಿದ್ದು, ಈಗ ಅಲ್ಪಸಂಖ್ಯಾತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ನೀಡುವಂತೆ ಆಗ್ರಹಿಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕುಬ್, ರಾಜ್ಯದ ಶೇ.80 ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾನ ಮಾಡಿದ್ದು, ಮೈತ್ರಿ ಸರ್ಕಾರ ರಚನೆಯ ಸಂದರ್ಭ ಅಲ್ಪಸಂಖ್ಯಾತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕಳೆದ ಅನೇಕ ವರ್ಷಗಳಿಂದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಈ ಬಾರಿಯಾದರೂ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಅಲ್ಪಸಂಖ್ಯಾತ ಮತದಾರರಿಗೆ ನ್ಯಾಯ ಒದಗಿಸಬೇಕೆಂದು ಕೆಪಿಸಿಸಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಸಮುದಾಯದ ನಾಯಕರಾದ ರೋಷನ್ ಬೇಗ್ ಅವರು ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯರಾದ ಇವರನ್ನು ಉಪಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುತ್ತಿದ್ದು, ಇದು ಜಾತ್ಯತೀತ ನೆಲೆಗಟ್ಟಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಜಯವಾಗಿದೆ ಎಂದು ಯಾಕುಬ್ ಅಭಿಪ್ರಾಯಪಟ್ಟಿದ್ದಾರೆ.

 

Please follow and like us:
0
http://bp9news.com/wp-content/uploads/2018/05/Z-K.A.YAKUB-3.jpghttp://bp9news.com/wp-content/uploads/2018/05/Z-K.A.YAKUB-3-150x150.jpgBP9 Bureauಕೊಡಗುಪ್ರಮುಖರಾಜಕೀಯಮಡಿಕೇರಿ  : ಹೊಸ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕಗ್ಗಂಟು ನಿಲ್ಲುವಂತೆ ಕಾಣುತ್ತಿಲ್ಲ. ಹಲವು ಸಮುದಾಯದವರು ತಮಗೆ ಡಿಸಿಎಂ ಸ್ಥಾನಕ್ಕೆ ಆಗ್ರಹಿಸುತ್ತಿದ್ದು, ಈಗ ಅಲ್ಪಸಂಖ್ಯಾತ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ನೀಡುವಂತೆ ಆಗ್ರಹಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕುಬ್, ರಾಜ್ಯದ ಶೇ.80 ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾನ ಮಾಡಿದ್ದು, ಮೈತ್ರಿ ಸರ್ಕಾರ ರಚನೆಯ ಸಂದರ್ಭ ಅಲ್ಪಸಂಖ್ಯಾತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ...Kannada News Portal