ಕೊಡಗು :  ಜಿಲ್ಲೆಯ ದಕ್ಷಿಣ ಭಾಗದಲ್ಲಿ  ನಿರಂತರವಾಗಿ ಭಾರಿ ಮಳೆ ಸುರಿದಿದ್ದು, ಇದರಿಂದಾಗಿ ಜಿಲ್ಲೆಯಿಂದ ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪೆರುಂಬಾಡಿಯಿಂದ ಮಾಕುಟ್ಟದವರೆಗೆ ಸುಮಾರು 25 ಕ್ಕೂ ಹೆಚ್ಚು ಭಾಗಗಳಲ್ಲಿ ಗಣನೀಯ ಪ್ರಮಾಣದ ಭೂಕುಸಿತ ಉಂಟಾಗಿದೆ. ಅಲ್ಲದೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು,  ಜೂನ್​​​12ರ  ತಡರಾತ್ರಿಯಿಂದ ಜೂನ್ 13 ರ ಸಂಜೆಯ ವರೆಗೂ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಧರೆ ಕುಸಿತದಿಂದ ಒಬ್ಬರು ಮೃತಪಟ್ಟಿದ್ದಾರೆ.

ಇನ್ನು ಈ ಅಡಚಣೆಯನ್ನು ತೆರವುಗೊಳಿಸಲು ಹಾಗೂ ಶೀಘ್ರವಾಗಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಂಚಾರಕ್ಕೆ ಯೋಗ್ಯವಾದ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಎಲ್ಲಾ ವಾಹನ ಸಂಚಾರಿಗಳ, ರಸ್ತೆ ಮತ್ತು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ  1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ದಲ್ಲಿರುವ ಅಧಿಕಾರದಂತೆ ತಾತ್ಕಾಲಿಕವಾಗಿ ಇಂದಿನಿಂದ ಅಂದರೆ ಜೂನ್ 13 ರಿಂದ ಜುಲೈ 12 ರ ವರೆಗೆ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ಪರ್ಯಾಯ ಮಾರ್ಗ

ಇನ್ನು ಮುಖ್ಯಹೆದ್ದಾರಿ ಬಂದ್​​ ಆಗುವುದರಿಂದ ಸಾರ್ವಜನಿಕರಿಗೆ ಪರ್ಯಾಯ ಮಾರ್ಗವನ್ನ ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ನಿಷೇಧಿತ ರಸ್ತೆಯ ಬದಲಿಗೆ ಗೋಣಿಕೊಪ್ಪ-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.

Please follow and like us:
0
http://bp9news.com/wp-content/uploads/2018/06/Rain-in-Kodagujpg.jpghttp://bp9news.com/wp-content/uploads/2018/06/Rain-in-Kodagujpg-150x150.jpgBP9 Bureauಕೊಡಗುಪ್ರಮುಖಕೊಡಗು :  ಜಿಲ್ಲೆಯ ದಕ್ಷಿಣ ಭಾಗದಲ್ಲಿ  ನಿರಂತರವಾಗಿ ಭಾರಿ ಮಳೆ ಸುರಿದಿದ್ದು, ಇದರಿಂದಾಗಿ ಜಿಲ್ಲೆಯಿಂದ ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪೆರುಂಬಾಡಿಯಿಂದ ಮಾಕುಟ್ಟದವರೆಗೆ ಸುಮಾರು 25 ಕ್ಕೂ ಹೆಚ್ಚು ಭಾಗಗಳಲ್ಲಿ ಗಣನೀಯ ಪ್ರಮಾಣದ ಭೂಕುಸಿತ ಉಂಟಾಗಿದೆ. ಅಲ್ಲದೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು,  ಜೂನ್​​​12ರ  ತಡರಾತ್ರಿಯಿಂದ ಜೂನ್ 13 ರ ಸಂಜೆಯ ವರೆಗೂ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಧರೆ ಕುಸಿತದಿಂದ ಒಬ್ಬರು ಮೃತಪಟ್ಟಿದ್ದಾರೆ. var domain...Kannada News Portal