ಕಲಬುರಗಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿ 208-19ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆದು ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಕೈಗಾರಿಕೆ ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕ-ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲ್ಬುರ್ಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಯುವಕ/ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕುಗಳಿಂದ ಗರಿಷ್ಠ 10 ಲಕ್ಷ ರೂ. ಮೊತ್ತದವರೆಗೆ ಸಾಲ ಪಡೆದು ಅತಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಬಹುದಾಗಿದೆ. ಯೋಜನಾ ವೆಚ್ಚ 5 ಲಕ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಯೋಜನೆಗಳನ್ನು ಸ್ಥಾಪಿಸಲು ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಠ 35 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಾಜಿಸೈನಿಕರು ಮತ್ತು ಅಂಗವಿಕಲರು ಕನಿಷ್ಠ 18 ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಈ ಯೋಜನೆಯಡಿ ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯಾವುದೇ ಆದಾಯ ಮಿತಿ ಇರುವುದಿಲ್ಲ. ಸಾಲ ಪಡೆಯಲಿಚ್ಛಿಸುವ ಗ್ರಾಮೀಣ ಅಭ್ಯರ್ಥಿಗಳು ವೆಬ್‍ಸೈಟ್‍ದಲ್ಲಿ ಜೂನ್ 1 ರಿಂದ ಜೂನ್ 30ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಬೇಕು.

ಈ ಯೋಜನೆಯಲ್ಲಿ ಹೊಸದಾಗಿ ಸಾಲ ಮಂಜೂರಾತಿ ಪಡೆದು ಪ್ರಾರಂಭಿಸುವ ಹೊಸ ಘಟಕಗಳಿಗೆ ಮಾತ್ರ ಸಹಾಯಧನ ಲಭ್ಯವಿರುತ್ತದೆ. ವಿಸ್ತರಣೆ, ಆಧುನೀಕರಣ ಘಟಕಗಳಿಗೆ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ.  ಪಿ.ಎಂ.ಇ.ಜಿ.ಪಿ., ಕೆ.ಎಸ್.ಇ.ಎಸ್. ಯೋಜನೆಯಲ್ಲಿ ಸಾಲ ಸೌಲಭ್ಯಗಳನ್ನು ಪಡೆದಿದ್ದಲ್ಲಿ ಇಲ್ಲಿ ಅರ್ಹತೆ ಇರುವುದಿಲ್ಲ. ಷರತ್ತು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂ. 08472-223988, 221637ಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

 

Please follow and like us:
0
http://bp9news.com/wp-content/uploads/2018/06/fXW1zP0n_400x400.jpghttp://bp9news.com/wp-content/uploads/2018/06/fXW1zP0n_400x400-150x150.jpgBP9 Bureauಕಲಬುರ್ಗಿಪ್ರಮುಖಕಲಬುರಗಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿ 208-19ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆದು ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಕೈಗಾರಿಕೆ ಸ್ಥಾಪಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕ-ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲ್ಬುರ್ಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಯುವಕ/ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಬ್ಯಾಂಕುಗಳಿಂದ ಗರಿಷ್ಠ 10...Kannada News Portal