ಕಲಬುರ್ಗಿ: ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಇಂದು ಭಾರತ್​ ಬಂದ್​ಗೆ ಕಾಂಗ್ರೆಸ್ ಕರೆ ನೀಡಿದೆ. ಕಲಬುರ್ಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಎಸ್‌ವಿಪಿ‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ್​ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದಿನ ಭಾರತ್ ಬಂದ್‌ಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಒಂದು ಈಡೇರಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಾ ವಿಶ್ವ ಪರ್ಯಟನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆಯೆಂಬ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಏನೇನು ಮಾಡಿದ್ದಾರೆ? ಯಡಿಯೂರಪ್ಪಗೆ ಇದೆಲ್ಲ ಕಾಣಿಸುವುದಿಲ್ಲವೇ? ಎಂದು ಪ್ರಶ್ನಿಸಿದರು. ಇದೀಗ ಜನರೇ ಬೀದಿಗಿಳಿದು ಪೆಟ್ರೋಲ್​, ಡೀಸೆಲ್ ಬೆಲೆ ಏರಿಕೆ ವಿರುದ್ಧ  ಹೋರಾಟ ಮಾಡುತ್ತಿದ್ದಾರೆ. ವಾಸ್ತವ ಅರಿಯದವ ಮಾತಾನಾಡುವುದು ಸರಿಯಿಲ್ಲ. ಸ್ವಯಂಪ್ರೇರಿತವಾಗಿ ಜನರೇ ಹೋರಾಟ ಮಾಡುತ್ತಿದ್ದಾರಷ್ಟೇ ಎಂದರು.

Please follow and like us:
0
http://bp9news.com/wp-content/uploads/2018/09/congress-leader-mallikarjun-1521272783.jpghttp://bp9news.com/wp-content/uploads/2018/09/congress-leader-mallikarjun-1521272783-150x150.jpgBP9 Bureauಕಲಬುರ್ಗಿಪ್ರಮುಖರಾಜಕೀಯಕಲಬುರ್ಗಿ: ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಇಂದು ಭಾರತ್​ ಬಂದ್​ಗೆ ಕಾಂಗ್ರೆಸ್ ಕರೆ ನೀಡಿದೆ. ಕಲಬುರ್ಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಎಸ್‌ವಿಪಿ‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500)...Kannada News Portal