ಕಲಬುರಗಿ: ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ತೃತೀಯ ಲಿಂಗಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ ಕ್ಯಾಂಡಲ್ ಲೈಟ್ ಜಾಥಾವನ್ನು  ಹಮ್ಮಿಕೊಳ್ಳಲಾಗಿತ್ತು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು ಮತ್ತು ವಿಕಲಚೇತನರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಎಲ್ಲರೂ ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮತದಾರರಲ್ಲಿ ಮನವಿ ಮಾಡಿದರು.

ಅವರು ಶುಕ್ರವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಎಸ್.ವಿ.ಪಿ. ವೃತ್ತದಿಂದ ಜಗತ್ ವೃತ್ತದವರೆಗೆ ತೃತೀಯ ಲಿಂಗಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ ಹಮ್ಮಿಕೊಂಡಿದ್ದ ಕ್ಯಾಂಡಲ್ ಲೈಟ್ ಜಾಥಾ ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನವಿದೆ. ಅವರಿಗೂ ಮತದಾನದ ಹಕ್ಕಿದೆ. ತಮ್ಮ ಹಕ್ಕನ್ನು ಚಾಚೂ ತಪ್ಪದೇ ಚಲಾಯಿಸಬೇಕು ಎಂದರು.

ಮತದಾನದ ಹಕ್ಕು ಸಂವಿಧಾನಾತ್ಮಕವಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ದೊರೆತಿದೆ. ಪ್ರತಿನಿಧಿಗಳನ್ನು ಚುನಾವಣೆಗಳ ಮೂಲಕ ಆಯ್ಕೆ ಮಾಡುವಾಗ ಮತವನ್ನು ಹಣ ಅಥವಾ ಬೇರೆ ಯಾವುದೇ ಆಮಿಷಕ್ಕೆ ಒಳಗಾಗದೇ ನೈತಿಕವಾಗಿ ಮತದಾನ ಮಾಡಬೇಕು. ಮತದಾನದ ಚೀಟಿ ಹೊಂದಿರುವ ಎಲ್ಲರೂ ಮತ ಚಲಾಯಿಸಿದ್ದಲ್ಲಿ ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದುವೇ ಚುನಾವಣಾ ಆಯೋಗದ ಗುರಿಯಾಗಿದೆ ಎಂದು ತಿಳಿಸಿದರು.

ಜಾಥಾದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮಹ್ಮದ್ ಯುಸೂಫ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್, ಜಿಲ್ಲಾ ಪಂಚಾಯತಿ ಸಹ ಕಾರ್ಯದರ್ಶಿ ಸಂಪತ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಆರ್. ರೆಡ್ಡಿ, ಯೋಜನಾ ನಿರ್ದೇಶಕ ಸೂರ್ಯಕಾಂತ, ಕಲಬುರಗಿ ಕೃಷಿ ಸಹಾಯಕ ನಿರ್ದೇಶಕ ಅನೀಲ ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ, ತೃತೀಯ ಲಿಂಗಿಗಳ ಸ್ನೇಹಾ ಸೊಸೈಟಿಯ ಅಧ್ಯಕ್ಷೆ ಮನೀಷಾ ಚವ್ಹಾಣ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮತ್ತಿತರ ಅಣ್ಯರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

Please follow and like us:
0
http://bp9news.com/wp-content/uploads/2018/05/sveep-candal-march-5-1.jpghttp://bp9news.com/wp-content/uploads/2018/05/sveep-candal-march-5-1-150x150.jpgBP9 Bureauಕಲಬುರ್ಗಿಪ್ರಮುಖರಾಜಕೀಯಕಲಬುರಗಿ: ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ತೃತೀಯ ಲಿಂಗಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ ಕ್ಯಾಂಡಲ್ ಲೈಟ್ ಜಾಥಾವನ್ನು  ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು ಮತ್ತು ವಿಕಲಚೇತನರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಎಲ್ಲರೂ ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮತದಾರರಲ್ಲಿ ಮನವಿ ಮಾಡಿದರು. ಅವರು ಶುಕ್ರವಾರ ಜಿಲ್ಲಾ ಸ್ವೀಪ್...Kannada News Portal