ಯಾದಗಿರಿ: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಿ ರೈತರ ಋಣ ತಿರಿಸುತ್ತೇವೆ, ರೈತರ ಹಾಗೂ ಜನಸಾಮಾನ್ಯರ ಏಳಿಗೆಗಾಗಿ ಶ್ರಮಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ  ಬೈತುಲ್ ಮಹಲ್ ನಲ್ಲಿ ಹಮ್ಮಿಕೊಂಡಿದ್ದ ವಿವಿಧ ಪಕ್ಷಗಳ ಕಾರ್ಯಾಕರ್ತರು ಜೆಡಿಎಸ್ ಪಕ್ಷ ಸೇರ್ಪಡೆ ಹಾಗೂ ಕಾರ್ಯಾಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರದಲ್ಲಿ  ಜೆಡಿಎಸ್ ಪಕ್ಷದ ಗೆಲುವಿಗೆ ಶ್ರಮೀಸುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕಾರ್ಯಾಕರ್ತರಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಯಾಕರ್ತರು ಮನೆ ಮನೆಗೆ ತೆರಳಿ ಪಕ್ಷದ ಅಭಿವೃದ್ಧಿ ಕಾರ್ಯಾಗಳನ್ನು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸಿಬೇಕು ಎಂದರು.

ಜೆಡಿಎಸ್ ಸೇರ್ಪಡೆ…

ಇದೆ ಸಂದರ್ಭದಲ್ಲಿ ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೊಡ್ಡಪ್ಪಗೌಡ ಕಳಗಿನಮನಿ,ಡಾ. ಶಫಿ ತುನ್ನೂರ,ಗುಂಡಪ್ಪ ಕಲಬುರ್ಗಿ, ಸೇರಿದಂತೆ ಅನೇಕರು ಜೆಡಿಎಸ್  ಪಕ್ಷಕ್ಕೆ ಸೇರ್ಪಡೆಯಾದರು.

ಸಮಾವೇಶದಲ್ಲಿ ಜೆಡಿಎಸ್ ಮುಖಂಡರಾದ ಬಂಡೆಪ್ಪ ಖಾಶಂಪೂರ,ಬಸವರಾಜ ಹೊರಟಿ,ಯಾದಗಿರಿ ವಿಧಾನಸಭೆ ಕ್ಷೇತ್ರದ  ಜೆಡಿಎಸ್ ಅಭ್ಯರ್ಥಿ ಎ.ಸಿ.ಕಾಡ್ಲೂರ್,ಹಾಗೂ ಶರಿಫ ಕಾಡ್ಲೂರ್,ನಾಗರತ್ನ ಕುಪ್ಪಿ, ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.

Please follow and like us:
0
http://bp9news.com/wp-content/uploads/2018/04/Kumaraswamy-593x445.jpghttp://bp9news.com/wp-content/uploads/2018/04/Kumaraswamy-593x445-150x150.jpgBP9 Bureauಯಾದಗಿರಿಯಾದಗಿರಿ: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಿ ರೈತರ ಋಣ ತಿರಿಸುತ್ತೇವೆ, ರೈತರ ಹಾಗೂ ಜನಸಾಮಾನ್ಯರ ಏಳಿಗೆಗಾಗಿ ಶ್ರಮಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದ  ಬೈತುಲ್ ಮಹಲ್ ನಲ್ಲಿ ಹಮ್ಮಿಕೊಂಡಿದ್ದ ವಿವಿಧ ಪಕ್ಷಗಳ ಕಾರ್ಯಾಕರ್ತರು ಜೆಡಿಎಸ್ ಪಕ್ಷ ಸೇರ್ಪಡೆ ಹಾಗೂ ಕಾರ್ಯಾಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರದಲ್ಲಿ  ಜೆಡಿಎಸ್ ಪಕ್ಷದ ಗೆಲುವಿಗೆ ಶ್ರಮೀಸುವ ಮೂಲಕ...Kannada News Portal