ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಾಗಮಾರಪಳ್ಳಿ ಸಹೋದರರು ಪಾದಯಾತ್ರೆ ನಡೆಸುವ ಮೂಲಕ ಮತಯಾಚಿಸಿದರು.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಅವರ ಸಹೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಚಿಕ್ಕಪೇಟೆಯಲ್ಲಿ ಪ್ರಚಾರ ನಡೆಸಿದರು.

ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚಿ, ಬೀದರ್ ಕ್ಷೇತ್ರದಲ್ಲಿ ಬದಲಾವಣೆ ತರಲು ತಮ್ಮನ್ನು ಆಶೀರ್ವದಿಸಬೇಕು ಎಂದು ಕೋರಿದರು. ಈ ವೇಳೆ ಅನೇಕ ಮಹಿಳೆಯರು ಅವರಿಗೆ ಆರತಿ ಬೆಳಗಿ ಬರಮಾಡಿಕೊಂಡರು.

ನನ್ನ ತಂದೆ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರು ಬೀದರ್ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳ ರಚನೆ, ನಿರುದ್ಯೋಗ ನಿವಾರಣೆಗೆ ಕೌಶಲ ತರಬೇತಿ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೊಂಡಿದ್ದರು. ಜನರ ಬಾಳು ಬೆಳಗಿಸಲು ನಿರಂತರ ಪ್ರಯತ್ನಿಸಿದ್ದರು ಎಂದು ಹೇಳಿದರು. ‘ಬೀದರ್‌  ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವುದು ತಂದೆಯವರ ಕನಸಾಗಿತ್ತು. ಅದನ್ನು ನನಸಾಗಿಸಲು ಚುನಾವಣೆಗೆ ಸ್ಪರ್ಧಿಸಿದ್ದೇನೆ. ’ ಎಂದು ಸೂರ್ಯಕಾಂತ ತಿಳಿಸಿದರು.

Please follow and like us:
0
http://bp9news.com/wp-content/uploads/2018/05/WhatsApp-Image-2018-05-03-at-10.51.44-AM.jpeghttp://bp9news.com/wp-content/uploads/2018/05/WhatsApp-Image-2018-05-03-at-10.51.44-AM-150x150.jpegBP9 Bureauಬೀದರ್ರಾಜಕೀಯಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಾಗಮಾರಪಳ್ಳಿ ಸಹೋದರರು ಪಾದಯಾತ್ರೆ ನಡೆಸುವ ಮೂಲಕ ಮತಯಾಚಿಸಿದರು.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಅವರ ಸಹೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಚಿಕ್ಕಪೇಟೆಯಲ್ಲಿ ಪ್ರಚಾರ ನಡೆಸಿದರು. ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚಿ, ಬೀದರ್ ಕ್ಷೇತ್ರದಲ್ಲಿ ಬದಲಾವಣೆ ತರಲು ತಮ್ಮನ್ನು ಆಶೀರ್ವದಿಸಬೇಕು ಎಂದು ಕೋರಿದರು. ಈ ವೇಳೆ ಅನೇಕ ಮಹಿಳೆಯರು ಅವರಿಗೆ ಆರತಿ ಬೆಳಗಿ ಬರಮಾಡಿಕೊಂಡರು. ನನ್ನ...Kannada News Portal