ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದ್ರಾಬಾದ್​​ ಕರ್ನಾಟಕದಲ್ಲಿ ಪ್ರವಾಸ ನಡೆಸಲಿದ್ದಾರೆ. ಹೈದ್ರಾಬಾದ್ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದು, ಕಲಬುರಗಿಯ ಎನ್ ವಿ ಕಾಲೇಜಿನ ಮೈದಾನದಲ್ಲಿ ಇಂದು ಮೊದಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬಳ್ಳಾರಿ ಮತ್ತು ಬೆಂಗಳೂರಿನ ಸಮಾವೇಶದಲ್ಲಿ ಮೋದಿ ಪ್ರಚಾರ ಕೈಗೊಳ್ಳಲಿದ್ದಾರೆ.

ಕಲಬುರಗಿ- ಯಾದಗಿರಿ ಜಿಲ್ಲೆಯಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ನಗರದ ಪ್ರಮುಖ ರಸ್ತೆಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮೋದಿ ಆಗಮನದ ಹಿನ್ನೆಲೆ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. 200 ಪೊಲೀಸ್ ಅಧಿಕಾರಿ, ಸಿಬ್ಬಂದಿ, 1600 ಹೋಮಗಾರ್ಡ್ಸ, ಡಿಎಆರ್, ಕೆ.ಎಸ್.ಆರ್.ಪಿ ತುಕಡಿಗಳ ನಿಯೋಜನೆ ಮಾಡುವ ಮೂಲಕ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಎಸ್.ಪಿ ಎನ್.ಶಶಿಕುಮಾರ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಹೈದ್ರಾಬಾದ್​​ ಕರ್ನಾಟಕದಲ್ಲಿ ಪ್ರವಾಸ ಮಾಡುವ ಮೂಲಕ  ಕಾಂಗ್ರೆಸ್ ಭದ್ರಕೋಟೆಯನ್ನು ಒಡೆಯಲು ಮೋದಿ ರಣತಂತ್ರ ರೂಪಿಸಿದ್ದಾರೆ.

Please follow and like us:
0
http://bp9news.com/wp-content/uploads/2018/05/collage-5.jpghttp://bp9news.com/wp-content/uploads/2018/05/collage-5-150x150.jpgBP9 Bureauಕಲಬುರ್ಗಿಪ್ರಮುಖರಾಜಕೀಯಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದ್ರಾಬಾದ್​​ ಕರ್ನಾಟಕದಲ್ಲಿ ಪ್ರವಾಸ ನಡೆಸಲಿದ್ದಾರೆ. ಹೈದ್ರಾಬಾದ್ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದು, ಕಲಬುರಗಿಯ ಎನ್ ವಿ ಕಾಲೇಜಿನ ಮೈದಾನದಲ್ಲಿ ಇಂದು ಮೊದಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬಳ್ಳಾರಿ ಮತ್ತು ಬೆಂಗಳೂರಿನ ಸಮಾವೇಶದಲ್ಲಿ ಮೋದಿ ಪ್ರಚಾರ ಕೈಗೊಳ್ಳಲಿದ್ದಾರೆ. ಕಲಬುರಗಿ- ಯಾದಗಿರಿ ಜಿಲ್ಲೆಯಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ನಗರದ ಪ್ರಮುಖ ರಸ್ತೆಗಳ ಸಂಚಾರದಲ್ಲಿ ಬದಲಾವಣೆ...Kannada News Portal