ಕಲಬುರಗಿ:  ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಬೀದರ್ ಗೆ ಭೇಟಿ ನೀಡುತ್ತಿದ್ದಾರೆ. ಆಗಸ್ಟ್ 13 ರಂದು ಬೀದರ್ ನಲ್ಲಿ ಜನಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ.

ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿಎಐಸಿಸಿ ಅಧ್ಯಕ್ಷರಿಗೆ ಅಭಿನಂದೆ ಸಮಾರಂಭ ಏರ್ಪಡಿಸಲಾಗಿದ್ದು, ಅಲ್ಲದೆ ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ 2ನೇ ಪಕ್ಷವಾಗಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜನರಿಗೆ  ಕೃತಜ್ಞತೆ ಸಲ್ಲಿಸಲು ರಾಹುಲ್ ಗಾಂಧಿ ಬೀದರ್ ಗೆ ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಬೀದರ್ ಮೇಲೆ ರಾಹುಲ್ ಗೆ ವಿಶೇಷ ಪ್ರೀತಿಯಿದ್ದು,ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹೆಚ್ಚಿನ ಬಾರಿ ಬೀದರ್ ಗೆ ತೆರಳಿ ಅಲ್ಲಿನ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಬಸವ ಕಲ್ಯಾಣಕ್ಕೆ ಭೇಟಿ ನೀಡಿದ್ದ ರಾಹುಲ್ ಹಲವು ಬಸವಣ್ಣನ ವಚನಗಳನ್ನು ಹೇಳಿದ್ದರು.

Please follow and like us:
0
http://bp9news.com/wp-content/uploads/2018/08/rahul-gandhi-obc-event-759-pti.jpghttp://bp9news.com/wp-content/uploads/2018/08/rahul-gandhi-obc-event-759-pti-150x150.jpgBP9 Bureauಕಲಬುರ್ಗಿಪ್ರಮುಖಬೀದರ್ರಾಜಕೀಯರಾಷ್ಟ್ರೀಯಕಲಬುರಗಿ:  ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಬೀದರ್ ಗೆ ಭೇಟಿ ನೀಡುತ್ತಿದ್ದಾರೆ. ಆಗಸ್ಟ್ 13 ರಂದು ಬೀದರ್ ನಲ್ಲಿ ಜನಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var...Kannada News Portal