ಕೋಲಾರ: ಭಾರತ್ ಬಂದ್ ಕೋಲಾರ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್​​ಗೆ ಬೆಂಬಲ ವ್ಯಕ್ತಪಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಹಿನ್ನಲೆ ಕೋಲಾರದಲ್ಲಿ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದರು. ಕೆಎಸ್​​ಆರ್​​ಟಿಸಿ ಬಸ್ ನಿಲ್ದಾಣದ ವೃತ್ತದಲ್ಲಿ  ಜೆಡಿಎಸ್, ರೈತ ಸಂಘ ಹಾಗೂ ಜಯ ಕರ್ನಾಟಕ ಸಂಘಟನೆಗಳಿಂದ ರಸ್ತೆಯಲ್ಲಿ ಸೌದೆಯಲ್ಲಿ ಟೀ, ಕಾಫಿ ಮಾಡಿ ರಸ್ತೆಯಲ್ಲಿ ಕುಳಿತು ಕುಡಿದರೆ,ಇನ್ನು ಕೆಲವರು ಕತ್ತೆಯ ಜೊತೆ ಸಿಲಿಂಡರ್ ಇಟ್ಟು ಪ್ರತಿಭಟಿದರು.

ತೈಲ ಬೆಲೆ ಏರಿಕೆ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿದ  ಪ್ರತಿಭಟನಾಕಾರರು ಪ್ರಧಾನಮಂತ್ರಿ ಮೋದಿ ಹಾಗು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೋಲಾರ ಜಿಲ್ಲೆಯ ಬಂಗಾಪೇಟೆ,ಕೆ.ಜಿ.ಎಫ್,ಮಾಲೂರು,ಮುಳಬಾಗಿಲು ಮತ್ತು ಶ್ರೀನಿವಾಸಪುರದಲ್ಲಿ ಬಂದ್ ಯಶಸ್ವಿಯಾಗಿದೆ .

ಶ್ರೀನಿವಾಸಪುರದಲ್ಲಿ ರಾಜ್ಯದಲ್ಲಿ ಆಡಳಿತ ರೂಢ ದೊಸ್ತಿ ಪಕ್ಷಗಳ ಸ್ಥಳೀಯ ಕಾರ್ಯಕರ್ತರು ಒಟ್ಟಿಗೆ ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು.ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಬಂದ್ ಯಶಸ್ಸು ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದರು.ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಮುಖಂಡರಾದ ದಿಂಬಾಲಆಶೋಕ್, ವೇಣು,ಹರಿಶ್,ಶಿವರಾಜ್, ಭಾಗವಸಿದ್ದರೆ, ಜೆಡಿಎಸ್ ಪ್ರತಿಭಟನೆ ನೇತೃತ್ವ ಸಂತೋಷ್ ವಹಿಕೊಂಡಿದ್ದರು.

ವರದಿ : ಚ.ಶ್ರೀನಿವಾಸಮೂರ್ತಿ

Please follow and like us:
0
http://bp9news.com/wp-content/uploads/2018/09/WhatsApp-Image-2018-09-10-at-6.33.58-PM-1024x681.jpeghttp://bp9news.com/wp-content/uploads/2018/09/WhatsApp-Image-2018-09-10-at-6.33.58-PM-150x150.jpegBP9 Bureauಕೋಲಾರಪ್ರಮುಖರಾಜಕೀಯಕೋಲಾರ: ಭಾರತ್ ಬಂದ್ ಕೋಲಾರ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್​​ಗೆ ಬೆಂಬಲ ವ್ಯಕ್ತಪಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಬಂದ್ ಹಿನ್ನಲೆ ಕೋಲಾರದಲ್ಲಿ ವಿನೂತನ...Kannada News Portal