ಮಂಡ್ಯ: ಪಾಂಡವಪುರ ತಾಲ್ಲೂಕು ಬೇಬಿಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಶ್ರೀರಂಗಪಟ್ಟಣ ಡಿವೈಎಸ್‌ಪಿ ವರದಿ ನೀಡಿರುವುದಾಗಿ ಆರ್‌ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ತಿಳಿಸಿದ್ದಾರೆ.

‘ಅಕ್ರಮ ಕಲ್ಲು ಗಣಿಗಾರಿಕೆ, ಬಂಡೆ ಸ್ಫೋಟದಿಂದ ಕೆಆರ್‌ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿತ್ತು. ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಶ್ರೀರಂಗಪಟ್ಟಣ ಡಿವೈಎಸ್‌ಪಿಗೆ ಸೂಚನೆ ನೀಡಿದ್ದರು’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಬೇಬಿಬೆಟ್ಟ, ಹೊನಗಾನಹಳ್ಳಿ, ರಾಗಿಮುದ್ದನಹಳ್ಳಿ ವ್ಯಾಪ್ತಿಯ ಶಿಲಾಪದರವು ಕೆಆರ್‌ಎಸ್ ಜಲಾಶಯವನ್ನು ಸಂಪರ್ಕಿಸುತ್ತದೆ. ಇಲ್ಲಿ ನಡೆಯುವ ಅತ್ಯಾಧುನಿಕ ಕಲ್ಲುಗಣಿ ಸ್ಫೋಟದಿಂದ ಜಲಾಶಯ ಅಪಾಯ ಎದುರಿಸುತ್ತಿದೆ ಎಂದು ಡಿವೈಎಸ್‌ಪಿ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಉಂಟಾಗುತ್ತಿರುವ ಅಪಾಯದ ಅರಿವಿದ್ದರೂ ಗಣಿಗಾರಿಕೆ ನಿಷೇಧಿಸಲು ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಆರೋಪಿಸಿದರು.

‘ಗಣಿಗಾರಿಕೆಯಿಂದ ಜಲಾಶಯಕ್ಕೆ ಧಕ್ಕೆಯಾಗಲಿದೆ ಎಂದು ನೇರವಾಗಿ ವರದಿ ನೀಡಿಲ್ಲ. ಆದರೆ ಪಾಂಡವಪುರ ತಹಶೀಲ್ದಾರ್ ಎರಡು ತಿಂಗಳ ಹಿಂದೆ ಗಣಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಮೊದಲು, ಗಣಿಗಳಿಂದ ಕೆಆರ್‌ಎಸ್‌ಗೆ ತೊಂದರೆಯಾಗುತ್ತದೆ ಎಂದು ಕಾರಣ ನೀಡಿದ್ದರು. ನಾನು ನೀಡಿದ ವರದಿಯಲ್ಲಿ ಇದನ್ನು ಉಲ್ಲೇಖ ಮಾಡಿದ್ದೇನೆ’ ಎಂದು ಡಿವೈಎಸ್‌ಪಿ ವಿಶ್ವನಾಥ್ ಹೇಳಿದರು.

Please follow and like us:
0
http://bp9news.com/wp-content/uploads/2018/09/krs-.jpghttp://bp9news.com/wp-content/uploads/2018/09/krs--150x150.jpgPolitical Bureauಪ್ರಮುಖಮಂಡ್ಯಮೈಸೂರುರಾಷ್ಟ್ರೀಯKRS damaged in dam Information revealed by RTI activist !!!ಮಂಡ್ಯ: ಪಾಂಡವಪುರ ತಾಲ್ಲೂಕು ಬೇಬಿಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಶ್ರೀರಂಗಪಟ್ಟಣ ಡಿವೈಎಸ್‌ಪಿ ವರದಿ ನೀಡಿರುವುದಾಗಿ ಆರ್‌ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ತಿಳಿಸಿದ್ದಾರೆ. ‘ಅಕ್ರಮ ಕಲ್ಲು ಗಣಿಗಾರಿಕೆ, ಬಂಡೆ ಸ್ಫೋಟದಿಂದ ಕೆಆರ್‌ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿತ್ತು. ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಶ್ರೀರಂಗಪಟ್ಟಣ ಡಿವೈಎಸ್‌ಪಿಗೆ ಸೂಚನೆ ನೀಡಿದ್ದರು’ ಎಂದು ಸುದ್ದಿಗಾರರಿಗೆ...Kannada News Portal