ಹೊಸದಿಲ್ಲಿ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ತೀವ್ರ ಹೃದಯಾಘಾತದ ಬಳಿಕ ಬೆಳಗ್ಗೆ 8:10 ರ ವೇಳೆಗೆ ಅವರು ಕೊನೆಯುಸಿರೆಳೆದರು. ಕಳೆದ ಮಂಗಳವಾರ ಮೊದಲ ಬಾರಿ ಹೃದಯಾಘಾತ ಸಂಭವಿಸಿದ ಬಳಿಕ ಅವರನ್ನು ಕೋಲ್ಕತದ ಬೆಲ್ಲೆ ವ್ಯೂ ಕ್ಲಿನಿಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿದ್ದರು.

12 ಜನ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಿತ್ತು ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಚಟರ್ಜಿ ಅವರು ಮಿದುಳಿನ ರಕ್ತನಾಳ ಒಡೆದು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. 40 ದಿನಗಳ ಕಾಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಹಾಗಿದ್ದರೂ ಕಳೆದ ಮಂಗಳವಾರ ಅವರ ಆರೋಗ್ಯಸ್ಥಿತಿ ತೀವ್ರ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು.

Please follow and like us:
0
http://bp9news.com/wp-content/uploads/2018/08/cha_710x400xt.jpghttp://bp9news.com/wp-content/uploads/2018/08/cha_710x400xt-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯLok Sabha x speaker Somnath Chatterjee is no more !!!var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180813100114'); document.getElementById('div_1520180813100114').appendChild(scpt); ಹೊಸದಿಲ್ಲಿ: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಸೋಮವಾರ ಬೆಳಗ್ಗೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ತೀವ್ರ ಹೃದಯಾಘಾತದ ಬಳಿಕ ಬೆಳಗ್ಗೆ 8:10 ರ ವೇಳೆಗೆ ಅವರು ಕೊನೆಯುಸಿರೆಳೆದರು. ಕಳೆದ ಮಂಗಳವಾರ ಮೊದಲ ಬಾರಿ...Kannada News Portal