ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮುಂಚೂಣಿಯಲಿದ್ದಾರೆಂಬ ಕಾರಣಕ್ಕೆ ಸಚಿವ ಸ್ಥಾನದಿಂದ ವಂಚಿತರಾಗಿರುವ ಎಂ.ಬಿ. ಪಾಟೀಲರು ಕಾಂಗ್ರೆಸ್‌ನಿಂದ ಹೊರ ಬರಲಿ ಎಂದು ಮಾತೆ ಮಹಾದೇವಿ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಬಿ. ಪಾಟೀಲ್ ಜಲಸಂಪನ್ಮೂಲ ಸಚಿವರಾಗಿ ಉತ್ತಮ ಆಡಳಿತ ನಡೆಸಿದ್ದಾರೆ. ಇವರೊಂದಿಗೆ ಸತೀಶ್ ಜಾರಕಿಹೊಳಿಯವರು ಸಹ ಉತ್ತಮ ಜನಪ್ರತಿನಿಧಿ ಎನಿಸಿಕೊಂಡಿದ್ದಾರೆ. ಆದರೆ, ಮೊದಲ ಹಂತದಲ್ಲಿ ಇವರಿಬ್ಬರಿಗೂ ಸಚಿವ ಸ್ಥಾನ ನೀಡದೆ ಅವಮಾನಿಸಲಾಗಿದೆ. ಎಂ.ಬಿ. ಪಾಟೀಲ್‌ರು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ  ಮುಂಚೂಣಿಯಲ್ಲಿ ಇದ್ದುದ್ದನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ ಎನ್ನುವ ಸಂದೇಹವಿದೆ ಎಂದು ಮಾತೆ ಮಹಾದೇವಿ ಹೇಳಿದರು.

ಇದು ನಮ್ಮ ಸಮುದಾಯಕ್ಕೆ ಮಾಡಿರುವ ಅಪಮಾನವಾಗಿದೆ. ಹೀಗಾಗಿ, ಅವರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬರಲಿ ಎಂದು ಹೇಳಿದರು. ಅಲ್ಲದೆ  ಹಲವಾರು ಪ್ರಗತಿಪರ ಕೆಲಸಗಳಿಗೆ ಆದ್ಯತೆ ನೀಡಿರುವ ಸತೀಶ್ ಜಾರಿಕಿಹೊಳಿಗೂ ಸಚಿವ ಸ್ಥಾನ ನೀಡದಿರುವುದು ಖಂಡನೀಯ. ಹೀಗಾಗಿ, ಸಮಾಜಪರವಾಗಿ ಚಿಂತಿಸುವವರು ಒಂದಾಗಿ ಕಾಂಗ್ರೆಸ್ ಪಕ್ಷದಿಂದ ಹೊರಗೆ ಬರಲಿ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಆದರೆ ಕೇಂದ್ರ ಸರ್ಕಾರ ಶಿಫಾರಸ್ಸನ್ನು ವಾಪಸ್ ಕಳುಹಿಸಿದೆ ಎನ್ನುವುದು ಸುಳ್ಳು ಸುದ್ದಿ ಎಂದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಲಿಂಗಾಯತ ಪ್ರತ್ಯೇಕ ಧರ್ಮವನ್ನು ದೃಢೀಕರಿಸಬಹುದು ಎಂದು ಆಶಯವ್ಯಕ್ತ ಪಡಿಸಿದರು.

Please follow and like us:
0
http://bp9news.com/wp-content/uploads/2018/06/dc-Cover-652ovhkibhg82kh6on274ihkn1-20180122034507.Medi_.jpeghttp://bp9news.com/wp-content/uploads/2018/06/dc-Cover-652ovhkibhg82kh6on274ihkn1-20180122034507.Medi_-150x150.jpegBP9 Bureauಪ್ರಮುಖರಾಜಕೀಯಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮುಂಚೂಣಿಯಲಿದ್ದಾರೆಂಬ ಕಾರಣಕ್ಕೆ ಸಚಿವ ಸ್ಥಾನದಿಂದ ವಂಚಿತರಾಗಿರುವ ಎಂ.ಬಿ. ಪಾಟೀಲರು ಕಾಂಗ್ರೆಸ್‌ನಿಂದ ಹೊರ ಬರಲಿ ಎಂದು ಮಾತೆ ಮಹಾದೇವಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಬಿ. ಪಾಟೀಲ್ ಜಲಸಂಪನ್ಮೂಲ ಸಚಿವರಾಗಿ ಉತ್ತಮ ಆಡಳಿತ ನಡೆಸಿದ್ದಾರೆ. ಇವರೊಂದಿಗೆ ಸತೀಶ್ ಜಾರಕಿಹೊಳಿಯವರು ಸಹ ಉತ್ತಮ ಜನಪ್ರತಿನಿಧಿ ಎನಿಸಿಕೊಂಡಿದ್ದಾರೆ. ಆದರೆ, ಮೊದಲ ಹಂತದಲ್ಲಿ ಇವರಿಬ್ಬರಿಗೂ ಸಚಿವ ಸ್ಥಾನ ನೀಡದೆ ಅವಮಾನಿಸಲಾಗಿದೆ. ಎಂ.ಬಿ. ಪಾಟೀಲ್‌ರು ಲಿಂಗಾಯತ...Kannada News Portal