ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಬಿಜೆಪಿ ವರಿಷ್ಠರ ವಿರುದ್ದ ಹರಿಹಾಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ ಕೋಟ್ಯಾನ್ ರಿಗೆ ಟಿಕೆಟ್ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮೂಡಬಿದ್ರೆಯ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮೂಲ್ಕಿ – ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಗದೀಶ್ ಅಧಿಕಾರಿ ಬಿಜೆಪಿ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ.

ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು ಮೂಡಬಿದ್ರೆಯಲ್ಲಿ ಗೆಲ್ಲುವ ಕುದುರೆಯನ್ನು ನಿಲ್ಲಿಸಿಲ್ಲ. ಅದರ ಬದಲಿಗೆ ಸತ್ತ ಕತ್ತೆಯನ್ನು ‌ನಿಲ್ಲಿಸಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಬಿದರೆ ಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಉಮಾನಾಥ್ ಕೋಟ್ಯಾನ್ ಗೆ ಟಿಕೆಟ್ ನೀಡಿರೋದಕ್ಕೆ ವಿರೋಧ ವ್ಯಕ್ತಪಡಿಸಿದರು. ಪಕ್ಷಕ್ಕಾಗಿ ಈ ವರೆಗೆ ನಿಯತ್ತಿನಿಂದ ದುಡಿದಿದ್ದೇನೆ. ಕ್ಷೇತ್ರದಲ್ಲಿ ಪಕ್ಷ ಸಂಘಟಿಸಿದ್ದೇನೆ. ಆದರೆ ಪಕ್ಷ ಈ ಬಾರಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಗೆಲ್ಲುವ ಕುದುರೆ ಬದಲು ಕ್ಷೇತ್ರದಲ್ಲಿ ಸತ್ತ ಕತ್ತೆಗೆ ಟಕೆಟ್ ನೀಡಿದೆ ಎಂದು ವಾಗ್ದಾಳಿ ನಡೆಸಿದರು.

ಮೂಡಬಿದರೆ ಯಲ್ಲಿ ನಾನು ‌ಸ್ವಂತ ಖರ್ಚಿನಲ್ಲಿ ಮಾಡಿದ ಬಿಜೆಪಿ ಕಚೇರಿಗೆ ಈಗ ಬೀಗ ಹಾಕಿದ್ದೇನೆ. ಪಕ್ಷ ಬಿಡುವ ವಿಚಾರ ವಾಗಿ ಎರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದರು.

ಅತ್ತ ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರಿಗೆ ಟಿಕೆಟ್ ಕೊಟ್ಟ ವಿಚಾರದಿಂದ ಅಲ್ಲಿಯ ಬಿಜೆಪಿ ಮುಖಂಡ ಅರುಣ್‌ಕುಮಾರ್ ಕುಮಾರ್ ಪುತ್ತಿಲ ಹಾಗೂ ಅಶೋಕ್ ಕುಮಾರ್ ರೈ ಅಸಮಾಧಾನಗೊಂಡಿದ್ದಾರೆ.

Please follow and like us:
0
http://bp9news.com/wp-content/uploads/2018/04/collage-9-6.jpghttp://bp9news.com/wp-content/uploads/2018/04/collage-9-6-150x150.jpgBP9 Bureauಮಂಗಳೂರುರಾಜಕೀಯಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಬಿಜೆಪಿ ವರಿಷ್ಠರ ವಿರುದ್ದ ಹರಿಹಾಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ ಕೋಟ್ಯಾನ್ ರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೂಡಬಿದ್ರೆಯ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮೂಲ್ಕಿ - ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ...Kannada News Portal