ಬೆಂಗಳೂರು : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ಬಿಎಸ್​​​ವೈ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು  ಸಂಭ್ರಮಾಚರಣೆ ನಡೆಸಿದ್ದಾರೆ.

ಗದಗ

ರಾಜ್ಯದ  ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಗದಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತ ದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.  ಅಲ್ಲದೆ ಕಾರ್ಯಕರ್ತರು ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೊದಿಗೆ ಜೈ ಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು.

ಮಂಗಳೂರು

ಇನ್ನು ದಕ್ಷಿಣಕನ್ನಡದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ರಾಜಭವನದಲ್ಲಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಮಂಗಳೂರಿನ ಮಂಗಳೂರಿನ ಕೋಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಟ್ಟರು.


ಮೈಸೂರು

ಸಾಂಸ್ಕೃತಿಕ ನಗರದಲ್ಲೂ ಕೂಡಾ ಬಿಎಸ್​​ವೈ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಕಮಲ ಪಾಳಯ ವಿಜಯೋತ್ಸವ ಆಚರಿಸಿದರು. ನಗರದ ೧೦೧ಗಣಪತಿ ದೇವಾಲಯದ ಮುಂದೆ ಯಡಿಯೂರಪ್ಪ ಭಾವಚಿತ್ರ ಹಿಡಿದು ಅವರ ಪರ ಘೋಷಣೆ ಕೂಗಿ ಸಂಭ್ರಮ ಪಟ್ಟರು.

ಅಥಣಿ

ಬಿಎಸ್​​ವೈ ರಾಜ್ಯದ 24ನೇ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಭಾಜಪ ಕಾರ್ಯಕರ್ತರು ಅಥಣಿ ಯಲ್ಲಿ ವಿಜಯೋತ್ಸವ ಆಚರಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ  ಲಕ್ಷ್ಮಣ್ ಸವದಿ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತಿದ್ದಂತೆ ಹರ್ಷ ವ್ಯಕ್ತಪಡಿಸಿದರು. ಒಟ್ಟಾರೆ ಬಿಎಸ್​​ವೈ ಮುಖ್ಯಮಂತ್ರಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಎಲ್ಲಡೆ ಸಂಭ್ರಮಾಚರಣೆ ನಡೆಯುತ್ತಿದೆ.

 

Please follow and like us:
0
http://bp9news.com/wp-content/uploads/2018/05/Karnatakada-Miditha-58.jpeghttp://bp9news.com/wp-content/uploads/2018/05/Karnatakada-Miditha-58-150x150.jpegBP9 Bureauಗದಗಪ್ರಮುಖಬೆಳಗಾವಿಮಂಗಳೂರುಮೈಸೂರುರಾಜಕೀಯಬೆಂಗಳೂರು : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ಬಿಎಸ್​​​ವೈ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು  ಸಂಭ್ರಮಾಚರಣೆ ನಡೆಸಿದ್ದಾರೆ. ಗದಗ ರಾಜ್ಯದ  ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಗದಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತ ದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.  ಅಲ್ಲದೆ ಕಾರ್ಯಕರ್ತರು ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೊದಿಗೆ ಜೈ ಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು. ಮಂಗಳೂರು ಇನ್ನು ದಕ್ಷಿಣಕನ್ನಡದಲ್ಲೂ...Kannada News Portal