ಮಂಗಳೂರು : ರಫೆಲ್ ಖರೀದಿ ಹಗರಣವನ್ನ ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಮಂಗಳೂರಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತು. ಮಂಗಳೂರಿನ ಜ್ಯೋತಿ ಸರ್ಕಲ್ ನಿಂದ ದಕ್ಷಿಣ ಕನ್ನಡ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಭಾಸ್ಕರ‌ ಮೊಯ್ಲಿ, ಮಾಜಿ ಶಾಸಕರಾದ ಬಿ.ಎ.ಮೊಯ್ದಿನ್ ಬಾವಾ, ಜೆ.ಆರ್.ಲೋಬೊ ಸೇರಿದಂತೆ ಕಾಂಗ್ರೆಸ್ ನ ಹಲವು ಮುಖಂಡರು ಭಾಗವಹಿಸಿದ್ದರು.


ನಂತರ ಸ್ಟೇಟ್ ಬ್ಯಾಂಕ್ ಬಳಿ ಇರೋ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯ್ತು. ಈ ವೇಳೆ ಪ್ರತಿಭಟನಾಕಾರರು, ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ನಡೆಸಿದ 45 ಸಾವಿರ ಕೋಟಿ ರೂಪಾಯಿಗಳ ಮೊತ್ತದ ರಫೆಲ್ ಯುದ್ದ ವಿಮಾನ ಹಗರಣ ಇದು ಎಂದು ಆರೋಪಿಸಿದರು‌.

Please follow and like us:
0
http://bp9news.com/wp-content/uploads/2018/09/-ಪ್ರತಿಭಟನೆ-BP9NEWS1-e1536654632450.jpeghttp://bp9news.com/wp-content/uploads/2018/09/-ಪ್ರತಿಭಟನೆ-BP9NEWS1-e1536654632450-150x150.jpegBP9 Bureauಪ್ರಮುಖಮಂಗಳೂರುರಾಜಕೀಯಮಂಗಳೂರು : ರಫೆಲ್ ಖರೀದಿ ಹಗರಣವನ್ನ ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಮಂಗಳೂರಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತು. ಮಂಗಳೂರಿನ ಜ್ಯೋತಿ ಸರ್ಕಲ್ ನಿಂದ ದಕ್ಷಿಣ ಕನ್ನಡ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಭಾಸ್ಕರ‌ ಮೊಯ್ಲಿ, ಮಾಜಿ ಶಾಸಕರಾದ ಬಿ.ಎ.ಮೊಯ್ದಿನ್ ಬಾವಾ, ಜೆ.ಆರ್.ಲೋಬೊ ಸೇರಿದಂತೆ...Kannada News Portal