ಮಂಗಳೂರು :  ಬಸ್ ಮತ್ತು ಕಾರ್​​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ಮನೆಯ ದಿನೇಶ್ ಪಿ ಹಾಗೂ ಧರ್ಮಸ್ಥಳದ ಸಂದೇಶ್ ಎಂದು ಗುರುತಿಸಲಾಗಿದೆ.

ಇವರಿಬ್ಬರು ಮಾರುತಿ 800 ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಕೊಕ್ಕಡದ ಸಮೀಪದ ಪಾರ್ಪಿಕಲು ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರಿಗೆ ಧರ್ಮಸ್ಥಳದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಗಂಭೀರ ಗಾಯಗೊಂಡಿದ್ದ ದಿನೇಶ್ ಮತ್ತು ಸಂದೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೊಳಗಾಗಿ ನಜ್ಜು ಗುಜ್ಜಾಗಿದ್ದ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದು ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
0
http://bp9news.com/wp-content/uploads/2018/08/WhatsApp-Image-2018-08-06-at-10.25.19-AM-1024x768.jpeghttp://bp9news.com/wp-content/uploads/2018/08/WhatsApp-Image-2018-08-06-at-10.25.19-AM-150x150.jpegBP9 Bureauಪ್ರಮುಖಮಂಗಳೂರುಮಂಗಳೂರು :  ಬಸ್ ಮತ್ತು ಕಾರ್​​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ಮನೆಯ ದಿನೇಶ್ ಪಿ ಹಾಗೂ ಧರ್ಮಸ್ಥಳದ ಸಂದೇಶ್ ಎಂದು ಗುರುತಿಸಲಾಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute =...Kannada News Portal