ಮಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದಾರೆ ಎಂದು ಸಚಿವ ರಮಾನಾಥ ರೈ ಹಾಗೂ ಯು.ಟಿ.ಖಾದರ್ ತಿಳಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು ನಾಳೆ ರಾಹುಲ್ ಗಾಂಧಿ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3:30ಕ್ಕೆ ಮೂಲ್ಕಿ ಮತ್ತು 4:20ಕ್ಕೆ ಸುರತ್ಕಲ್‌ನಲ್ಲಿ ಜನಾಶೀರ್ವಾದ ಯಾತ್ರೆ ಮುಂದುವರಿಸಲಿದ್ದಾರೆ ಎಂದರು.


ಇನ್ನು ಸಂಜೆ 5:20ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ರೋಡ್ ಶೋ ನಡೆಸಲಿದ್ದಾರೆ. 6 ಗಂಟೆಗೆ ನೆಹರೂ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರದ ನಾಯಕರು ಭಾಗವಹಿಸಲಿದ್ದಾರೆ. 7:30ರ ಬಳಿಕ ನಗರದ ರೊಝಾರಿಯೋ ಚರ್ಚ್, ಕುದ್ರೋಳಿ ದೇವಸ್ಥಾನ, ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 8:30ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ಪಕ್ಷದ ಬ್ಲಾಕ್ ಅಧ್ಯಕ್ಷರ ಸಭೆ ಹಾಗೂ 9:30ಕ್ಕೆ ಪಕ್ಷದ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಶೃಂಗೇರಿಗೆ ತೆರಳಲಿದ್ದಾರೆ ಎಂದರು.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಬಿಪಿ9 ನ್ಯೂಸ್ ಮಂಗಳೂರು

Please follow and like us:
0
http://bp9news.com/wp-content/uploads/2018/03/ramanathBP9-News-Web-Portal.jpeghttp://bp9news.com/wp-content/uploads/2018/03/ramanathBP9-News-Web-Portal-150x150.jpegBP9 Bureauಮಂಗಳೂರುಮಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದಾರೆ ಎಂದು ಸಚಿವ ರಮಾನಾಥ ರೈ ಹಾಗೂ ಯು.ಟಿ.ಖಾದರ್ ತಿಳಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು ನಾಳೆ ರಾಹುಲ್ ಗಾಂಧಿ 11:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಉಡುಪಿಯ ಕಾಪುವಿನಲ್ಲಿ ನಡೆಯುವ ಸೇವಾದಳದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ. 3:30ಕ್ಕೆ ಮೂಲ್ಕಿ ಮತ್ತು...Kannada News Portal