ಮಂಗಳೂರು : ನಾಳೆ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು , ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಎರಡು ದಿನಗಳ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್  ಮತ್ತು ಮಂಗಳೂರು ಪೊಲೀಸ್ ಕಮೀಷನರ್ ವಿಫುಲ್ ಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಕಾನೂನು ಭಂಗ ಗೊಳಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೇ 16 ರಾತ್ರಿ 12 ಗಂಟೆವರೆಗೆ ವಿಜಯೋತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ . ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ತಿಳಿಸಿದರು.

14ನೇ ತಾರೀಖು ಮಧ್ಯರಾತ್ರಿ ಯಿಂದ 16 ನೇ ತಾರೀಖು ಮಧ್ಯರಾತ್ರಿ ತನಕ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ144 ಸೆಕ್ಷನ್ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ತನಕ ಮದ್ಯಮಾರಾಟ ನಿಷೇಧ ಮಾಡಲಾಗಿದೆ. ಮತ ಎಣಿಕೆ ಕಾರ್ಯ ಕ್ರಮಬದ್ಧವಾಗಿರುತ್ತೆ. ನಿಧಾನವಾದ್ರೂ ಗೊಂದಲಕ್ಕೆ ಅವಕಾಶ ಇರೋದಿಲ್ಲ. ಸ್ಟ್ರಾಂಗ್ ರೂಂ ಗೆ ಮೂರು ಹಂತದ ಭಧ್ರತೆ ಮಾಡಲಾಗಿದೆ ಎಂದವರು ತಿಳಿಸಿದರು

Please follow and like us:
0
http://bp9news.com/wp-content/uploads/2018/05/xcv.pnghttp://bp9news.com/wp-content/uploads/2018/05/xcv-150x150.pngBP9 Bureauಮಂಗಳೂರುರಾಜಕೀಯಮಂಗಳೂರು : ನಾಳೆ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು , ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಎರಡು ದಿನಗಳ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್  ಮತ್ತು ಮಂಗಳೂರು ಪೊಲೀಸ್ ಕಮೀಷನರ್ ವಿಫುಲ್ ಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಕಾನೂನು ಭಂಗ ಗೊಳಿಸಿದ್ರೆ...Kannada News Portal