ಉಡುಪಿ :  ಮರವಂತೆ ರಾಷ್ಟ್ರಿಯ ಹೆದ್ದಾರಿ 66ರಲ್ಲಿ  ಕಾರಿಗೆ ಬೈಕ್ ಡಿಕ್ಕಿ  ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ಬೆಂಕಿ ಉಂಟಾಗಿ  ಬೈಕ್ ಸಂಪೂರ್ಣ ಭಸ್ಮಗೊಂಡಿದ್ದು, ಬೈಕ್ ಸವಾರ  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರದಿಂದ ಬೈಂದೂರು ಕಡೆಗೆ ಬರುತ್ತಿದ್ದ ಬೈಕ್ ಸವಾರರು, ನಾಗೂರಿನಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‍ಗೆ ಬೆಂಕಿ ತಗುಲಿ ಬೈಕ್ ಸಂಪೂರ್ಣ ಭಸ್ಮಗೊಂಡಿತ್ತು, ಅಲ್ಲದೆ ಕಾರಿನ ಮುಂಭಾಗ ಸಂಪೂರ್ಣ ಬೆಂಕಿ ತಗುಲಿ ಸಾಕಷ್ಟು ನಷ್ಟ ಸಂಭವಿಸಿದೆ.

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರ ಸಹಕಾರದೊಂದಿಗೆ  ಬೆಂಕಿಯನ್ನು ನಂದಿಸಿ, ಗಾಯಾಳನ್ನು  ಅಂಬುಲೆನ್ಸ್ ಮೂಲಕ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Please follow and like us:
0
http://bp9news.com/wp-content/uploads/2018/05/collage-1-38.jpghttp://bp9news.com/wp-content/uploads/2018/05/collage-1-38-150x150.jpgBP9 Bureauಉಡುಪಿಮಂಗಳೂರುಉಡುಪಿ :  ಮರವಂತೆ ರಾಷ್ಟ್ರಿಯ ಹೆದ್ದಾರಿ 66ರಲ್ಲಿ  ಕಾರಿಗೆ ಬೈಕ್ ಡಿಕ್ಕಿ  ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ಬೆಂಕಿ ಉಂಟಾಗಿ  ಬೈಕ್ ಸಂಪೂರ್ಣ ಭಸ್ಮಗೊಂಡಿದ್ದು, ಬೈಕ್ ಸವಾರ  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಬೈಂದೂರು ಕಡೆಗೆ ಬರುತ್ತಿದ್ದ ಬೈಕ್ ಸವಾರರು, ನಾಗೂರಿನಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‍ಗೆ ಬೆಂಕಿ ತಗುಲಿ...Kannada News Portal