ಮಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ಇಬ್ಬರು ಯುವಕರನ್ನ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಇರ್ಷಾದ್ ಹಾಗೂ ರಶೀದ್ ಎಂದು ಗುರುತಿಸಲಾಗಿದೆ.
ಇವರಿಬ್ಬರು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಪೆರುವಾಯಿ ಎಂಬಲ್ಲಿ ಬಾಯಾರು ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡುತ್ತಿದ್ದರು. ಈ ಕುರಿತ ಖಚಿತ ಮಾಹಿತಿಯಂತೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ವಾಗಿ ಎರಡು ದನ ಸಾಗಾಟ ಮಾಡುತ್ತಿದ್ದದ್ದು ಬಯಲಾಗಿದೆ. ಹೀಗಾಗಿ ಪೊಲೀಸರು ಎರಡು ಜಾನುವಾರನ್ನ ಹಾಗೂ ಪಿಕಪ್ ವಾಹನವನ್ನ ವಶಪಡಿಸಿಕೊಂಡಿದ್ದಾರೆ. ಹಾಗೆಯೇ ಬಂಧಿತರ ವಿರುದ್ದ ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಪ್ರಾಣಿ ಹಿಂಸೆ ನಿಷೇಧ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Please follow and like us:
0
http://bp9news.com/wp-content/uploads/2018/06/IMG-20180611-WA0004-1024x768.jpghttp://bp9news.com/wp-content/uploads/2018/06/IMG-20180611-WA0004-150x150.jpgBP9 BureauAbout Usಪ್ರಮುಖಮಂಗಳೂರುಮಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ಇಬ್ಬರು ಯುವಕರನ್ನ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಇರ್ಷಾದ್ ಹಾಗೂ ರಶೀದ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಪೆರುವಾಯಿ ಎಂಬಲ್ಲಿ ಬಾಯಾರು ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡುತ್ತಿದ್ದರು. ಈ ಕುರಿತ ಖಚಿತ ಮಾಹಿತಿಯಂತೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ವಾಗಿ ಎರಡು ದನ ಸಾಗಾಟ ಮಾಡುತ್ತಿದ್ದದ್ದು ಬಯಲಾಗಿದೆ....Kannada News Portal