ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಈ ಹಗರಣದ ಬಗ್ಗೆ ತನಿಖೆ ನಡೆದರೆ ಮೋದಿ ಅವರು ಬಚಾವಾಗಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ನಾಗಪುರದಲ್ಲಿ ಜಮೀನು ಖರೀದಿಗೆ ಉದ್ಯಮಿ ಅನಿಲ್‌ ಅಂಬಾನಿ ಅವರಿಗೆ ಡಾಸೋ ಏವಿಯೇಷನ್‌ ಸಂಸ್ಥೆಯು ₹284 ಕೋಟಿ ಕೊಟ್ಟಿದೆ. ಇದು ಲಂಚದ ಮೊದಲ ಕಂತು. ನಾಗಪುರದಲ್ಲಿ ಜಮೀನು ಇದೆ ಎಂಬುದೇ ರಫೇಲ್‌ ಒಪ್ಪಂದದಲ್ಲಿ ರಿಲಯನ್ಸ್‌ ಡಿಫೆನ್ಸ್ ಸಂಸ್ಥೆಯನ್ನು ದೇಶೀ ಪಾಲುದಾರ ಸಂಸ್ಥೆಯಾಗಿ ಆಯ್ಕೆ ಮಾಡಲು ಕಾರಣ ಎಂದು ನಂತರ ಹೇಳಲಾಯಿತು ಎಂದು ರಾಹುಲ್‌ ಹೇಳಿದ್ದಾರೆ.

‘ಈ ಜಮೀನಿಗೆ ಅನಿಲ್‌ ಅಂಬಾನಿ ಹಣ ಕೊಟ್ಟಿಲ್ಲ, ಬದಲಿಗೆ ಡಾಸೋ ಕಂಪನಿಯೇ ಹಣ ನೀಡಿದೆ. ಸಿಬಿಐ ಮುಖ್ಯಸ್ಥರು ಈ ಪ್ರಕರಣದ ಪರಿಶೀಲನೆ ನಡೆಸುತ್ತಿದ್ದರು. ಹಾಗಾಗಿಯೇ ಅವರನ್ನು ಆ ಸ್ಥಾನದಿಂದ ಕದಲಿಸಲಾಗಿದೆ’ ಎಂದು ಅವರು ಆಪಾದಿಸಿದರು. ರಿಲಯನ್ಸ್‌ ಎಡಿಎಜಿ ಸಂಸ್ಥೆಗೆ ಡಾಸೋ ಕಂಪನಿಯಿಂದ ಸುಮಾರು ₹284 ಕೋಟಿ ಪಾವತಿಯಾಗಿದೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಅವರು ಮಾತನಾಡಿದರು.

ನಾಗಪುರ ವಿಮಾನ ನಿಲ್ದಾಣಕ್ಕೆ ತಾಗಿಕೊಂಡು ರಿಲಯನ್ಸ್‌ ಡಿಫೆನ್ಸ್‌ ಸಂಸ್ಥೆಯು ಜಮೀನು ಹೊಂದಿದೆ ಎಂಬುದೇ ದೇಶೀ ಪಾಲುದಾರನಾಗಿ ಈ ಸಂಸ್ಥೆಯನ್ನು ಆಯ್ಕೆ ಮಾಡಲು ಕಾರಣ ಎಂದು ಡಾಸೋ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎರಿಕ್‌ ಟ್ರಾಪಿಯರ್‌ ಸಂದರ್ಶನವೊಂದರಲ್ಲಿ ಇತ್ತೀಚೆಗೆ ಹೇಳಿದ್ದರು.

Please follow and like us:
0
http://bp9news.com/wp-content/uploads/2018/10/rahul-g.jpghttp://bp9news.com/wp-content/uploads/2018/10/rahul-g-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯModi's escape is impossible !!!ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಈ ಹಗರಣದ ಬಗ್ಗೆ ತನಿಖೆ ನಡೆದರೆ ಮೋದಿ ಅವರು ಬಚಾವಾಗಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() *...Kannada News Portal