ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ  ಶಾಸಕ ಸತೀಶ್ ಜಾರಕೀಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಸತೀಶ್ ಜಾರಕೀಹೊಳಿ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಹಾಗೂ ಮಳವಳ್ಳಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎಸ್.ರವಿ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಶಕ್ತಿಯಾಗಿ ಬೆಳೆದಿರುವ ಶಾಸಕ ಸತೀಶ್ ಜಾರಕೀಹೊಳಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಹುದ್ದೆ ನೀಡುವ ಮೂಲಕ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ , ಬೆಸ್ತ ಹಾಗೂ ಗಂಗಮತಸ್ಥ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ನಾಯಕ, ಬೆಸ್ತರು, ಗಂಗಮತಸ್ಥ ಸೇರಿದಂತೆ ಒಟ್ಟು 90 ಲಕ್ಷದಷ್ಟು ಜನಸಂಖ್ಯೆ ಇದ್ದು, ರಾಜಕೀಯವಾಗಿ ಸಮುದಾಯದ ಮುಖಂಡರಿಗೆ ಯಾವುದೇ ರಾಜಕೀಯ ಪಕ್ಷಗಳು ಪ್ರಾಧಾನ್ಯತೆ ನೀಡುತ್ತಿಲ್ಲ. ಹಿಂದಿನ ಸರ್ಕಾರಗಳಲ್ಲಿ ಎರಡು ಭಾರಿ ಸಚಿವರಾಗಿ ಉತ್ತಮ ಆಡಳಿತ ನೀಡಿದ್ದಾರೆ. ಈ ಬಾರಿಯಾದರೂ ಸಮ್ಮಿಶ್ರ ಸರ್ಕಾರಗಳು ರಾಜಕೀಯ ಅನುಭವವಿರುವ ಸತೀಶ್ ಜಾರಕೀಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರೊಂದಿಗೆ ಸಮುದಾಯಕ್ಕೆ ಶಕ್ತಿ ತುಂಬಬೇಕೆಂದು ಒತ್ತಾಯ ಮಾಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಎಲ್ಲಾ ತಾಲೂಕುಗಳಲ್ಲಿ ಶಾಸಕ ಸತೀಶ್ ಜಾರಕೀಹೊಳಿ ಅಭಿಮಾನಿ ಬಳಗ ಹೊಂದಿದ್ದು, ಇಡೀ ಸಮುದಾಯ ಇವರ ಬೆಂಬಲಕ್ಕಿದೆ. ಆದ್ದರಿಂದ ಇವರಿಗೆ ಪ್ರಮುಖ ಹುದ್ದೆ ನೀಡಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದು ಹೇಳಿದರು.

Please follow and like us:
0
http://bp9news.com/wp-content/uploads/2018/05/collage-5-5.jpghttp://bp9news.com/wp-content/uploads/2018/05/collage-5-5-150x150.jpgBP9 Bureauಪ್ರಮುಖಬೆಳಗಾವಿಮಂಡ್ಯರಾಜಕೀಯಮಂಡ್ಯ : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ  ಶಾಸಕ ಸತೀಶ್ ಜಾರಕೀಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಸತೀಶ್ ಜಾರಕೀಹೊಳಿ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಹಾಗೂ ಮಳವಳ್ಳಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎಸ್.ರವಿ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಶಕ್ತಿಯಾಗಿ ಬೆಳೆದಿರುವ ಶಾಸಕ ಸತೀಶ್ ಜಾರಕೀಹೊಳಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಹುದ್ದೆ ನೀಡುವ ಮೂಲಕ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ , ಬೆಸ್ತ ಹಾಗೂ ಗಂಗಮತಸ್ಥ...Kannada News Portal