ಬೆಂಗಳೂರು : ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವಾಗ ಪತನವಾಗುತ್ತೋ ಎನ್ನುವ ಕುತೂಹಲ ರಾಜ್ಯದ ಜನತೆಯಲ್ಲಿದೆ. ಹೀಗಿರುವಾಗ ಸಮ್ಮಿಶ್ರ ಸರ್ಕಾರದ ಮೇಲೆ ಕೋಡಿ ಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ರಾಜೇಂದ್ರ ಸ್ವಾಮಿಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ ಎಂದು ನುಡಿದಿದ್ದಾರೆ.

ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ. 2 ತಿಂಗಳ ಹಿಂದೆಯೇ ಸಹೋದರರ ಬಲ ಹೆಚ್ಚಲಿದೆ ಎಂದು ನಾನು ಹೇಳಿದ್ದೆ ಅಂದರೆ ಸಹೋದರ ಕಂಟಕ ಎಂದು. ಅದರಂತೆ ಬೆಳಗಾವಿಯ ಸಹೋದರರು ಕಂಟಕವಾಗಿದ್ದಾರೆ ಎಂದು ಹೇಳಿದ್ದಾರೆ.
ಕೋಡಿ ಶ್ರೀ ನುಡಿದಂತೆ ಜಾರಕಿಹೊಳಿ ಸಹೋದರ ಹೊರತುಪಡಿಸಿ ಮೈತ್ರಿ ಸರ್ಕಾರಕ್ಕೆ ಕಂಟಕ ತರುವ ಆ ಅಣ್ಣ ಯಾರು ಎನ್ನುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದೆ. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಶ್ರೀಗಳು ಹೇಳಿದ್ದರು. ಅದರಂತೆ ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲದಿಂದ ಮುಖ್ಯಮಂತ್ರಿಯಾಗಿರುವುದನ್ನು ಇಲ್ಲಿ ನೆನಪಿಸಬಹುದು.
Please follow and like us:
0
http://bp9news.com/wp-content/uploads/2018/09/kodimatt-sree.jpghttp://bp9news.com/wp-content/uploads/2018/09/kodimatt-sree-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು : ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವಾಗ ಪತನವಾಗುತ್ತೋ ಎನ್ನುವ ಕುತೂಹಲ ರಾಜ್ಯದ ಜನತೆಯಲ್ಲಿದೆ. ಹೀಗಿರುವಾಗ ಸಮ್ಮಿಶ್ರ ಸರ್ಕಾರದ ಮೇಲೆ ಕೋಡಿ ಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ರಾಜೇಂದ್ರ ಸ್ವಾಮಿಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ...Kannada News Portal