ಮಂಗಳೂರು
: ಜಿಲ್ಲೆಯಲ್ಲಿ ಬೆಂಕಿ ಹಚ್ಚಿದರೆ ಬಾವಿ ನೀರು ಉರಿಯುವ ವಿಲಕ್ಷಣ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ಕಂಡು ಬಂದಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಸಮೀಪದ ಕಾನಕೆರೆ ಎಂಬಲ್ಲಿ ಈ ಘಟನೆ ನಡೆಯುತ್ತಿದೆ. ಕಾನಕೆರೆಯ ನಾಲ್ಕು ಬಾವಿಗಳ ನೀರಿನಲ್ಲಿ ಪಟ್ರೋಲಿಯಂ ಅಂಶ ಕಂಡುಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಾನಕೆರೆ ಪ್ರದೇಶ ಜನವಸತಿ ಹೊಂದಿದ್ದು, ಇಲ್ಲಿ ಹಲವು ತೆರೆದ ಬಾವಿಗಳಿವೆ.

 
ಈ ಪೈಕಿ ನಾಲ್ಕು ಬಾವಿಗಳಲ್ಲಿನ ನೀರು ಪೆಟ್ರೋಲ್ ವಾಸನೆಯಿಂದ ಕೂಡಿದ್ದು, ಬೆಂಕಿ ಹಚ್ಚಿದ್ದರೆ ಹೊತ್ತಿ ಉರಿಯುತ್ತಿದೆ. ಇದು ಸ್ಥಳೀಯ ನಿವಾಸಿಗಳನ್ನು ಆತಂಕ್ಕೆಈಡುಮಾಡಿದೆ. ಕಳೆದೆರಡು ದಿನಗಳಿಂದ ಇಂತಹ ಪ್ರಕರಣ ನಡೆಯುತ್ತಿದ್ದರೂ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾತ್ರಿ ಬಾವಿಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ರಾತ್ರಿಯವರೆಗೆ ಅಗ್ನಿಶಾಮಕ ದಳ ಇತ್ತ ಆಗಮಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ವರದಿ : ಅನುಷ್ ಕೊಟ್ಟಾರಿ

Please follow and like us:
0
http://bp9news.com/wp-content/uploads/2018/11/BP9-NEWS-30.jpeghttp://bp9news.com/wp-content/uploads/2018/11/BP9-NEWS-30-150x150.jpegBP9 Bureauಪ್ರಮುಖಮಂಗಳೂರುಮಂಗಳೂರು: ಜಿಲ್ಲೆಯಲ್ಲಿ ಬೆಂಕಿ ಹಚ್ಚಿದರೆ ಬಾವಿ ನೀರು ಉರಿಯುವ ವಿಲಕ್ಷಣ ಘಟನೆ ಮಂಗಳೂರಿನ ದೇರಳಕಟ್ಟೆಯಲ್ಲಿ ಕಂಡು ಬಂದಿದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಸಮೀಪದ ಕಾನಕೆರೆ ಎಂಬಲ್ಲಿ ಈ ಘಟನೆ ನಡೆಯುತ್ತಿದೆ. ಕಾನಕೆರೆಯ ನಾಲ್ಕು ಬಾವಿಗಳ ನೀರಿನಲ್ಲಿ ಪಟ್ರೋಲಿಯಂ ಅಂಶ ಕಂಡುಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಾನಕೆರೆ ಪ್ರದೇಶ ಜನವಸತಿ ಹೊಂದಿದ್ದು, ಇಲ್ಲಿ ಹಲವು ತೆರೆದ ಬಾವಿಗಳಿವೆ. var domain = (window.location != window.parent.location)? document.referrer :...Kannada News Portal