ಬೆಂಗಳೂರು : ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನಲೆಯಲ್ಲಿ ವಿಜಯಪುರದ ಬಸವನ ಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರೊಬ್ಬರು ತೆಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅವರ ಬೆಂಬಲಿಗ ತಮ್ಮಣ್ಣ ಕಾನಗಡ್ಡಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಇತ್ತ ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಅವರ ಬೆಂಬಲಿಗ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದು ಕಡೆ ಬೆಳಗಾವಿಯಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಅವರು ಯಾವುದೇ ಕಾರಣಕ್ಕೂ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡಬೇಡಿ.

ಲಕ್ಷ್ಮಿ ಹೆಬ್ಬಾಳಕರ, ಅಂಜಲಿ ನಿಂಬಾಳಕರ ಹಾಗೂ ಗಣೇಶ ಹುಕ್ಕೇರಿಗೆ ಮಂತ್ರಿ ಪಟ್ಟ ಕೊಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜೊತೆಗೆ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

Please follow and like us:
0
http://bp9news.com/wp-content/uploads/2018/05/jdscongress-30-1472561048.jpghttp://bp9news.com/wp-content/uploads/2018/05/jdscongress-30-1472561048-150x150.jpgPolitical Bureauಪ್ರಮುಖರಾಜಕೀಯProtest at head over stone Benefits for Congress Ministers !!!ಬೆಂಗಳೂರು : ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನಲೆಯಲ್ಲಿ ವಿಜಯಪುರದ ಬಸವನ ಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರೊಬ್ಬರು ತೆಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅವರ ಬೆಂಬಲಿಗ ತಮ್ಮಣ್ಣ ಕಾನಗಡ್ಡಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು ಹಾಗೂ...Kannada News Portal