ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಬೀದರ್‌ನಿಂದ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಆಲೋಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ನಿಧನರಾದ ಬಳಿಕ ಬೀದರ್‌ ಕ್ಷೇತ್ರಕ್ಕೆ ಅವರ ಪುತ್ರ ವಿಜಯ್‌ ಸಿಂಗ್‌ ಹೆಸರು ಕೇಳಿಬಂದಿತ್ತು. ಆದರೆ, ಈಗ ರಾಹುಲ್‌ ಗಾಂಧಿ ಅವರನ್ನೇ ಎರಡನೇ ಕ್ಷೇತ್ರವಾಗಿ ಕಣಕ್ಕಿಳಿಸಲು ದಿನೇಶ್‌ ಗುಂಡೂರಾವ್ ಯೋಚಿಸಿದ್ದಾರೆ.

ಸದ್ಯ ಬೀದರ್‌ನಲ್ಲಿ ಬಿಜೆಪಿ ಸಂಸದರಿದ್ದರೂ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆದ್ದಿರುವ ಕಾಂಗ್ರೆಸ್‌ ತನ್ನ ಬಲ ಹೆಚ್ಚಿಸಿಕೊಂಡಿದೆ. ಅಲ್ಲದೆ, ರಾಹುಲ್‌ ಅವರನ್ನು ಇಲ್ಲಿಂದ ಕಣಕ್ಕಿಳಿಸಿದರೆ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಬಳ್ಳಾರಿ, ಕೊಪ್ಪಳ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗುವ ಸಾಧ್ಯತೆ ಇವೆ ಎಂಬ ಲೆಕ್ಕಾಚಾರವಿದೆ.

ಈ ಬಗ್ಗೆ ರಾಹುಲ್‌ ಜೊತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ ವೇಣುಗೋಪಾಲ್‌ ಮಾತು ಕತೆ ನಡೆಸಿದ್ದಾರೆ ಎನ್ನಲಾಗಿದೆ. ಬೀದರ್‌ನಲ್ಲಿ ಸೋಮವಾರ ನಡೆಯುವ ಕೈ ಪಾಳೆಯದ ಜನದನಿ ಸಮಾವೇಶದ ಬಳಿಕ ಇಲ್ಲಿ ಸ್ಪರ್ಧೆ ಮಾಡುವ ಬಗ್ಗೆ ರಾಹುಲ್‌ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

Please follow and like us:
0
http://bp9news.com/wp-content/uploads/2018/06/rahul-gandhi-in-kanpur.jpghttp://bp9news.com/wp-content/uploads/2018/06/rahul-gandhi-in-kanpur-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯRahul Gandhi to contest from Karnataka : State Congress Plan !!!ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಬೀದರ್‌ನಿಂದ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಆಲೋಚಿಸಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180801100541'); document.getElementById('div_1520180801100541').appendChild(scpt); ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ನಿಧನರಾದ ಬಳಿಕ ಬೀದರ್‌ ಕ್ಷೇತ್ರಕ್ಕೆ ಅವರ ಪುತ್ರ...Kannada News Portal