ಬೆಂಗಳೂರು: ಪ್ರತಿಷ್ಠೆ ಕಾರಣಕ್ಕೆ ಕಾಂಗ್ರೆಸ್‌ನ ರಾಜ್ಯ ನಾಯಕರ ವಿರುದ್ಧ ಸಮರ ಸಾರಿ ಉಭಯ ಪಕ್ಷಗಳ ವರಿಷ್ಠರ ನಿದ್ದೆಗೆಡಿಸಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಕೊನೆಗೂ ಶಸ್ತ್ರ ಕೆಳಗಿಟ್ಟಿದ್ದಾರೆ. ಇದರಿಂದಾಗಿ, ಮೈತ್ರಿ ಸರ್ಕಾರ ದೊಡ್ಡ ಬಿಕ್ಕಟ್ಟಿನಿಂದ ಪಾರಾಗಿದೆ.

ಬೆಳಗಾವಿಯ ಆಂತರಿಕ ರಾಜಕಾರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹಸ್ತಕ್ಷೇಪ ವಿಪರೀತವಾಗಿದೆ ಎಂದು ಆರೋಪಿಸಿದ್ದ ಸಹೋದರರು, ‘ಇದಕ್ಕೆ ಕಡಿವಾಣ ಹಾಕದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದ್ದರು.

‘ನಾನು ಬಿಜೆಪಿಗೆ ಸೇರುತ್ತಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಕೆಲವು ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ. ಈ ಎಲ್ಲ ಬೇಡಿಕೆಗಳಿಗೆ ಕಾಂಗ್ರೆಸ್‌ ನಾಯಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಹೆಚ್ಚೇನೂ ಮಾತನಾಡಬಯಸುವುದಿಲ್ಲ’ ಎಂದಿದ್ದಾರೆ.

‘ನನ್ನ ಬೇಡಿಕೆಗಳನ್ನು ಸಿದ್ದರಾಮಯ್ಯ ಅವರ ಮುಂದೆ ಇಟ್ಟಿದ್ದೇನೆ. ಅವರು ಹೈಕಮಾಂಡ್ ಗಮನಕ್ಕೆ ತರುತ್ತಾರೆ’ ಎಂದು ಹೇಳಿದರು. ಈ ಬೆಳವಣಿಗೆಯ ಬೆನ್ನಲ್ಲೇ, ಆಸ್ಪತ್ರೆಗೆ ದಾಖಲಾಗಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಮೇಶ, ಒಂದು ಗಂಟೆಗೂ ಹೆಚ್ಚು ಕಾಲ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಅಲ್ಲಿಗೆ ಕಾಂಗ್ರೆಸ್‌ ಅಂತರ್ಯುದ್ಧ ಸದ್ಯಕ್ಕೆ ಕೊನೆಗೊಂಡಂತಾಗಿದೆ.

Please follow and like us:
0
http://bp9news.com/wp-content/uploads/2018/09/23-07-2018_bgm-jarakihole.jpghttp://bp9news.com/wp-content/uploads/2018/09/23-07-2018_bgm-jarakihole-150x150.jpgPolitical Bureauಪ್ರಮುಖರಾಜಕೀಯRamesh Jarkhiholi down the weapon !!! : Government Without a Big Crisisಬೆಂಗಳೂರು: ಪ್ರತಿಷ್ಠೆ ಕಾರಣಕ್ಕೆ ಕಾಂಗ್ರೆಸ್‌ನ ರಾಜ್ಯ ನಾಯಕರ ವಿರುದ್ಧ ಸಮರ ಸಾರಿ ಉಭಯ ಪಕ್ಷಗಳ ವರಿಷ್ಠರ ನಿದ್ದೆಗೆಡಿಸಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಕೊನೆಗೂ ಶಸ್ತ್ರ ಕೆಳಗಿಟ್ಟಿದ್ದಾರೆ. ಇದರಿಂದಾಗಿ, ಮೈತ್ರಿ ಸರ್ಕಾರ ದೊಡ್ಡ ಬಿಕ್ಕಟ್ಟಿನಿಂದ ಪಾರಾಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now()...Kannada News Portal