ರಾಯಚೂರು : ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಹುನ್ನಾರ ನಡೆಸಿರುವ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಕರೆ ನೀಡಿದರು.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರು ಮತ್ತು ದಲಿತರ ಹಾಗೂ ರೈತರನ್ನು ಸಂಪೂರ್ಣವಗಿ ಕಡೆಗಣಿಸಲಾಗಿದ್ದು, ಅವರ ಸ್ಥಿತಿ ಬದಲಾವಣೆಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಎಸ್‍ಪಿ ಮೈತ್ರಿಗೆ ಜನರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಮತಾಂಧ ಶಕ್ತಿಗಳು ಅಲ್ಪಸಂಖ್ಯಾತ ಮತ್ತು ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲು ಎಸ್‍ಸಿ, ಎಸ್‍ಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಮುಂದಾಗಿವೆ. ಈ ಕುರಿತು  ಕಮಿಟಿ ವರದಿಯಲ್ಲಿ ಉಲ್ಲೇಖಿಸಲಾಗಿದ್ದು ದೇಶದಲ್ಲಿ ದಲಿತ, ಆದಿವಾಸಿ ಅಲ್ಪಸಂಖ್ಯಾತರ ಜೊತೆಯಲ್ಲಿ ಮೇಲ್ವರ್ಗದ ಬಡವರಿಗೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದೇವೇಗೌಡರು ರೈತರ ಪರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಅಧಿಕಾರಾವಧಿಯಲ್ಲಿ ರೈತ ಪರ ಕೈಗೊಂಡ ನಿರ್ಧಾರಗಳ ಕುರಿತು ಸ್ಪಷ್ಟಪಡಿಸಬೇಕು ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಬಿಎಸ್‍ಪಿ ಎಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತರಲು ಮನವಿ ಮಾಡಿದರು.

Please follow and like us:
0
http://bp9news.com/wp-content/uploads/2018/05/WhatsApp-Image-2018-05-06-at-3.55.41-PM-1024x768.jpeghttp://bp9news.com/wp-content/uploads/2018/05/WhatsApp-Image-2018-05-06-at-3.55.41-PM-150x150.jpegBP9 Bureauರಾಜಕೀಯರಾಯಚೂರುರಾಯಚೂರು : ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಹುನ್ನಾರ ನಡೆಸಿರುವ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕೆಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಕರೆ ನೀಡಿದರು. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರು ಮತ್ತು ದಲಿತರ ಹಾಗೂ ರೈತರನ್ನು ಸಂಪೂರ್ಣವಗಿ ಕಡೆಗಣಿಸಲಾಗಿದ್ದು, ಅವರ ಸ್ಥಿತಿ ಬದಲಾವಣೆಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಎಸ್‍ಪಿ ಮೈತ್ರಿಗೆ ಜನರು ಬೆಂಬಲಿಸಬೇಕು...Kannada News Portal