ಮೈಸೂರು: ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ. ಮಹೇಶ್ ಅವರು ಬುಧವಾರ ಮೈಸೂರು ರೇಸ್‍ಕೊರ್ಸ್‍ಗೆ ಭೇಟಿ ನೀಡಿ, ಜೂನ್ 21 ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಿದ್ಧತೆ ಪರಿಶೀಲಿಸಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ, ಆಯುಷ್, ನೆಹರು ಯುವಕೇಂದ್ರ ಮತ್ತು ಯೋಗ ಒಕ್ಕೂಟಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಕಳೆದ ವರ್ಷ ಮೈಸೂರು ಜಿಲ್ಲೆ ಯೋಗ ದಿನಾಚರಣೆಯಲ್ಲಿ ಗಿನ್ನಿಸ್ ದಾಖಲೆ ಮಾಡಿದೆ. ಈ ಬಾರಿ ಅದಕ್ಕಿಂತ ಹೆಚ್ಚು ಸಾರ್ವಜನಿಕರನ್ನು ಸೇರಿಸಿ, ಗಮನ ಸೆಳೆಯುವಂತೆ ಆಯೋಜಿಸಲಾಗುವುದು ಎಂದರು. ಹೆಚ್ಚು ಜನ ಸೇರುವುದರಿಂದ ಸ್ವಚ್ಚತೆ, ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಮುಂತಾದವನ್ನು ಅಚ್ಚುಕಟ್ಟಾಗಿ ಮಾಡಬೇಕು. ಬೇಕಾಗುವ ಅನುದಾನವನ್ನು ಸರ್ಕಾರದಿಂದ ಹಾಗೂ ಪ್ರಯೋಜಕರಿಂದ ಒದಗಿಸಲು ಕ್ರಮವಹಿಸಲಾಗುವುದು ಎಂದರು.

ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಸಲು ಹೆಚ್ಚು ಪ್ರೋತ್ಸಾಹಿಸಬೇಕು. ವ್ಯಾಪಕ ಪ್ರಚಾರಕ್ಕಾಗಿ ಹೆದ್ದಾರಿ ಫಲಕಗಳನ್ನು ಅಳವಡಿಸಬೇಕು. ಗೇಟ್‍ಗಳ ಮಾಹಿತಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು. ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೇಗೌಡ, ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಸೇರಿದಂತೆ ಇನ್ನೂ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಸಚಿವರು ತಿಳಿಸಿದರು.

ಶಾಸಕರಾದ ಎಸ್.ಎ.ರಾಮದಾಸ್ ಅವರು ಮಾತನಾಡಿ, ಕಳೆದ ಸಾಲಿನಲ್ಲಿ 55 ಸಾವಿರ ಜನ ಯೋಗಾಸನ ಮಾಡಿ ದಾಖಲೆ ಮಾಡಿದ್ದಾರೆ. ಈ ಬಾರಿ 80 ಸಾವಿರ ಜನ ಯೋಗಾಸನ ಮಾಡುವ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಮೈಸೂರಿನ ಪ್ರಮುಖ 6 ಯೋಗ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಾಗಿದ್ದಾರೆ ಎಂದರು. ಈ ವರೆಗೆ ಆಗಿರುವ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್ ಅವರು ಸಚಿವರಿಗೆ ವಿವರಿಸಿದರು. ವೇದಿಕೆ ಹಾಗೂ ಧ್ವನಿ ವ್ಯವಸ್ಥೆ, ಪಾರ್ಕಿಂಗ್, ಗೇಟ್ ಹಂಚಿಕೆ, ಬಸ್ ಮಾರ್ಗ ನಿಗದಿ ಮುಂತಾದ ಸಿದ್ಧತೆಗಳ ಮಾಹಿತಿ ನೀಡಿದರು. ಸಭೆಯಲ್ಲಿ ಜಿಎಸ್‍ಎಸ್ ಯೋಗ ಸಂಸ್ಥೆಯ ಶ್ರೀಹರಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್, ಪ್ರವಾಸೋದ್ಯಮ ಉಪ ನಿರ್ದೇಶಕ ಜನಾರ್ಧನ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸೀತಾಲಕ್ಷ್ಮಿ ಮೈಸೂರು ರೇಸ್‍ಕೋರ್ಸ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
0
http://bp9news.com/wp-content/uploads/2018/06/ಸಾ.ರಾ.-ಮಹೇಶ್-ಮತ್ತು-ರಾಮದಾಸ್.jpghttp://bp9news.com/wp-content/uploads/2018/06/ಸಾ.ರಾ.-ಮಹೇಶ್-ಮತ್ತು-ರಾಮದಾಸ್-150x150.jpgBP9 Bureauಪ್ರಮುಖಮೈಸೂರು: ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ. ಮಹೇಶ್ ಅವರು ಬುಧವಾರ ಮೈಸೂರು ರೇಸ್‍ಕೊರ್ಸ್‍ಗೆ ಭೇಟಿ ನೀಡಿ, ಜೂನ್ 21 ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಿದ್ಧತೆ ಪರಿಶೀಲಿಸಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ, ಆಯುಷ್, ನೆಹರು ಯುವಕೇಂದ್ರ ಮತ್ತು ಯೋಗ ಒಕ್ಕೂಟಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು. ಕಳೆದ ವರ್ಷ ಮೈಸೂರು ಜಿಲ್ಲೆ ಯೋಗ ದಿನಾಚರಣೆಯಲ್ಲಿ ಗಿನ್ನಿಸ್ ದಾಖಲೆ...Kannada News Portal