ರಾಮನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ನೀಡಿದ್ದ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿದ್ದರಿಂದ ತೆರವಾಗಿದ್ದ ರಾಮನಗರ ಜಿಲ್ಲಾ ಪಂಚಾಯಿತಿಗೆ ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷೆಯಾಗಿದ್ದ ಬಿ.ಎನ್. ದಿವ್ಯಾ ಗಂಗಾಧರ್ ಬುಧವಾರ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಿಂದ ಅಬಿನಂಧನೆ ಸ್ವೀಕರಿಸಿ ಮಾತನಾಡಿದ ಅವರು ಪಕ್ಷದ ವರಿಷ್ಟರಾದ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದರಾದ ಡಿ.ಕೆ.ಸುರೇಶ್ ಅವರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಾನು ಪ್ರಭಾರ ಅಧ್ಯಕ್ಷ ಸ್ಥಾನ ನಿರೀಕ್ಷೆ ಮಾಡಿರಲಿಲ್ಲ, ಒದಗಿ ಬಂದಿರುವ ಈ ಸುಸಂಧರ್ಭವನ್ನು ಉತ್ತಮ ರೀತಿಯಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದರು.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ಕ್ಷೇತ್ರಗಳ ಅಬಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಸರ್ಕಾರಕ್ಕೆ ಮನವಿ ಸಲ್ಲಿಸಿ, ಸಿಎಂಕುಮಾರಸ್ವಾಮಿ ಮತ್ತು ಸಚಿವರಾದ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿ ಹೆಚ್ಚಿನ ಅನುದಾನವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಈ ಹಿಂದೆ ಜಿಪಂ ಸದಸ್ಯರ ಕ್ಷೇತ್ರಕ್ಕೆ ತಲಾ 1 ಕೋಟಿ 60 ಲಕ್ಷ ಅನುದಾನ ಸರ್ಕಾರದಿಂದ ಬಿಡುಗಡೆ ಯಾಗುತ್ತಿತ್ತು. ಆದರೆ ಪ್ರಶ್ತುತ 22.50 ಲಕ್ಷ ಮಾತ್ರ ಬಿಡುಗಡೆಯಾಗುತ್ತದೆ. ಈ ಹಣದಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದಿಲ್ಲ. ಆಗಾಗಿ ಅನುದಾನ ಅವಶ್ಯಕತೆಯಿದೆ. ಕಳೆದ ಸಾಲಿನಲ್ಲಿ ಮಾರ್ಚಿ ಅಂತ್ಯಕ್ಕೆ  ಕೆಲಸಗಳನ್ನು ಪೂರ್ಣಗೊಳಿಸದೆ ಉಳಿಸಿಕೊಂಡಿದ್ದರು. ಆದರೆ ಈ ಸಾಲಿನಲ್ಲಿ ಶೀಘ್ರವಾಗಿ ಕೆಲಸಗಳನ್ನು ಪೂರ್ಣಗೊಳಿಸಲು ಸಿಇಓ ಮತ್ತು ಎಇಇ ಅವರೊಮದಿಗೆ ಸಭೆ ನಡೆಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ ಅವರು ನರೇಗಾ ಅಡಿ ಹೆಚ್ಚಿನ ಕೆಲಸಗಳಿಗೆ ಹೆಚ್ಚು ಆಧ್ಯತೆ ನೀಡುತ್ತೇನೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಜಿಪಂ ಸದಸ್ಯ ಗಂಗಾಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಮೂರ್ತಿ ಮಾಗಡಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗಂಗಾಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ನೀಡಿದ್ದ ರಾಜೀನಾಮೆಯನ್ನು ಸರ್ಕಾರವು ಸೆ-18 ಮಂಗಳವಾರದಿಂದ ಜಾರಿಗೆ ಬರುವಂತೆ ಅಂಗೀಕರಿಸಿ, ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಉಚ್ಚ ನ್ಯಾಯಾಲಯ ಆದೇಶ ನೀಡಿದೆ.

ಸಿ.ಪಿ.ರಾಜೇಶ್ ಉಚ್ಚ ನ್ಯಾಯಾಲಯದಲ್ಲಿ ರಿಟ್ ಪಿಟಿಷನ್ ಸಲ್ಲಿಸಿದ್ದು, ಸದರಿ ದಾವೆಯಲ್ಲಿ ಮಧ್ಯಂತರ ಆದೇಶ ನೀಡಿರುವ ಹಿನ್ನಲೆಯಲ್ಲಿ ಸದರಿಯವರ ರಾಜೀನಾಮೆಯನ್ನು ಅಂಗೀಕಾರ ಮಾಡಿರುವುದಿಲ್ಲ. ಎಂಬುದನ್ನು ನ್ಯಾಯಾಲಯ ಮನಗಂಡು, ಉಚ್ಚ ನ್ಯಾಯಾಲಯ ಉಲ್ಲೇಖ(2)ರಂತೆ ಸೆ,17 ರಂದು ಆದೇಶವನ್ನು ಹೊರಡಿಸಿ, ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನವು ತೆರವಾಗಿದ್ದು, ಮುಂದಿನ ಅಧ್ಯಕ್ಷರ ಆಯ್ಕೆಯಾಗುವವರೆಗೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 194 ರನ್ವಯ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು, ಅಧ್ಯಕ್ಷರ ಅಧಿಕಾರ ಮತ್ತು ಕರ್ತವ್ಯ ನಿರ್ವಹಿಸಲು ಕ್ರಮ ವಹಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂ.ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ವೆಂಕಟೇಶ್ ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
0
http://bp9news.com/wp-content/uploads/2018/09/WhatsApp-Image-2018-09-19-at-5.44.45-PM-1024x768.jpeghttp://bp9news.com/wp-content/uploads/2018/09/WhatsApp-Image-2018-09-19-at-5.44.45-PM-150x150.jpegBP9 Bureauಪ್ರಮುಖರಾಜಕೀಯರಾಮನಗರರಾಮನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ನೀಡಿದ್ದ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿದ್ದರಿಂದ ತೆರವಾಗಿದ್ದ ರಾಮನಗರ ಜಿಲ್ಲಾ ಪಂಚಾಯಿತಿಗೆ ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷೆಯಾಗಿದ್ದ ಬಿ.ಎನ್. ದಿವ್ಯಾ ಗಂಗಾಧರ್ ಬುಧವಾರ ಅಧಿಕಾರ ವಹಿಸಿಕೊಂಡರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಈ ಸಂದರ್ಭದಲ್ಲಿ ಪಕ್ಷದ ಮುಖಂಡರಿಂದ...Kannada News Portal