ರಾಮನಗರ: ತಾಲ್ಲೂಕಿನ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಭಾಗ್ಯಲಕ್ಷ್ಮಿಗುಡ್ಡತಿಮ್ಮಯ್ಯ ಮತ್ತು ಉಪಾಧ್ಯಕ್ಷರಾಗಿ ಮಮತಾ ಸಿದ್ದರಾಜು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಶಶಿಕಲಾ ಶಿವಣ್ಣ ಮತ್ತು ಉಪಾಧ್ಯಕ್ಷರಾಗಿದ್ದ ತಾಯಕ್ಕ ಅವರ ರಾಜೀನಾಮೆಯಿಂದ ತೆರವಾಗಿದ್ದ ಅದ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿತ್ತು. ಅಂಕನಹಳ್ಳಿ ಮತಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾಗ್ಯಲಕ್ಷ್ಮಿಗುಡ್ಡತಿಮ್ಮಯ್ಯ ಅಧ್ಯಕ್ಷ ಸ್ಥಾನಕ್ಕೆ ಮತ್ತು ಕೂಟಗಲ್ ಮತಕ್ಷೇತ್ರದಿಂದ ಆಯ್ಕೆಯಾಗಿದ್ದ ಮಮತಾ ಸಿದ್ದರಾಜು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಇವರನ್ನು ಹೊರತುಪಡಿಸಿ ಬೇರೆ ಯಾವ ಸದಸ್ಯರು ಸಹ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸದ ಕಾರಣ ಭಾಗ್ಯಲಕ್ಷ್ಮಿಗುಡ್ಡತಿಮ್ಮಯ್ಯ ಅಧ್ಯಕ್ಷರಾಗಿ, ಮಮತಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಸಭೆಯಲ್ಲಿ ಘೋಷಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಿಡಿಓ ಮುನಿಯಪ್ಪ ಕಾರ್ಯದರ್ಶಿ ಲಕ್ಷ್ಮಣ್ ಇದ್ದರು. 19 ಸದಸ್ಯ ಬಲವುಳ್ಳ ಕೂಟಗಲ್ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಚುನಾವಣಾ ಸಭೆಯಲ್ಲಿ 18 ಸದಸ್ಯರು ಭಾಗವಹಿಸಿದ್ದರು. ಒಬ್ಬರು ಗೈರಾಗಿದ್ದರು.

ಅಭಿನಂದನೆ: ನೂತನವಾಗಿ ಅಧ್ಯಕ್ಷೆಯಾಗಿ ಆಯ್ಕೆಯಾದ ಭಾಗ್ಯಲಕ್ಷ್ಮಿಗುಡ್ಡತಿಮ್ಮಯ್ಯ, ಉಪಾಧ್ಯಕ್ಷರಾಗಿ ಆಯ್ಕೆಯಾದ ಮಮತಾ ಅವರನ್ನು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್, ಎಪಿಎಂಸಿ ನಿರ್ದೇಶಕ ವಿ.ವೆಂಕಟರಂಗಯ್ಯ, ಮುಖಂಡರಾದ ದೇವರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಶಿವಣ್ಣ, ಮಾಜಿ ಉಪಾಧ್ಯಕ್ಷೆ ತಾಯಕ್ಕ, ಸದಸ್ಯರಾದ ಜಗದೀಶ್, ಮಂಚೇಗೌಡ, ಶಿವರಾಮು, ರುದ್ರೇಶ್, ಆಶಾರಾಣಿ. ಮಮತಾ ಸೇರಿದಂತೆ ಮತ್ತಿತರರು ಹಾಜರಿದ್ದು ಅಭಿನಂದಿಸಿದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-22-at-6.10.04-PM-1024x722.jpeghttp://bp9news.com/wp-content/uploads/2018/06/WhatsApp-Image-2018-06-22-at-6.10.04-PM-150x150.jpegBP9 Bureauರಾಮನಗರರಾಮನಗರ: ತಾಲ್ಲೂಕಿನ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಭಾಗ್ಯಲಕ್ಷ್ಮಿಗುಡ್ಡತಿಮ್ಮಯ್ಯ ಮತ್ತು ಉಪಾಧ್ಯಕ್ಷರಾಗಿ ಮಮತಾ ಸಿದ್ದರಾಜು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಶಶಿಕಲಾ ಶಿವಣ್ಣ ಮತ್ತು ಉಪಾಧ್ಯಕ್ಷರಾಗಿದ್ದ ತಾಯಕ್ಕ ಅವರ ರಾಜೀನಾಮೆಯಿಂದ ತೆರವಾಗಿದ್ದ ಅದ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿತ್ತು. ಅಂಕನಹಳ್ಳಿ ಮತಕ್ಷೇತ್ರದಿಂದ ಆಯ್ಕೆಯಾಗಿದ್ದ...Kannada News Portal