ಹಾಸನ :  5 ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕಿದೆ ಎಂದು ನಿಯೋಜಿತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿನ  ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ  ಕುಮಾರಸ್ವಾಮಿ ಭೇಟಿ ನೀಡಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ  ಕುಮಾರಸ್ವಾಮಿ, ದೇವರ ಅನುಗ್ರಹ, ಹೆತ್ತವರ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ. ನಾನು ಹುಟ್ಟಿ ಬೆಳೆದ ಲಕ್ಷ್ಮಿ ನರಸಿಂಹ ಸ್ವಾಮಿ, ಹರದನಹಳ್ಳಿ ಶಿವನ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು.

ಮಧ್ಯಾಹ್ನ ದೆಹಲಿಗೆ ಹೋಗಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಾಯಾವತಿ ಭೇಟಿ ಮಾಡುವೆ. ಜೊತೆಗೆ ನನಗೆ ಬೆಂಬಲ ನೀಡಿರುವ ಕಾಂಗ್ರೆಸ್​​​ನ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ಮಾಡುವೆ.5 ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕಿದೆ ಎಂದರು.

ಈ ಬಾರಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲು ಎಂಬುದು ನನಗೆ ಗೊತ್ತಿದೆ.ಎಲ್ಲರ ಅಭಿಪ್ರಾಯಗಳನ್ನು ನಾನು ಗಮನಿಸುತ್ತಿದ್ದೇನೆ. ಯಾರೂ ನನ್ನನ್ನು ನಿದ್ರೆಗೆಡಿಸಲು ಆಗಲ್ಲ ಎಂದು ಶ್ರೀರಾಮುಲುಗೆ ತಿರುಗೇಟು ನೀಡಿದರು.

Please follow and like us:
0
http://bp9news.com/wp-content/uploads/2018/05/kummi.pnghttp://bp9news.com/wp-content/uploads/2018/05/kummi-150x150.pngBP9 Bureauಪ್ರಮುಖರಾಜಕೀಯರಾಮನಗರ  ಹಾಸನ :  5 ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕಿದೆ ಎಂದು ನಿಯೋಜಿತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿನ  ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ  ಕುಮಾರಸ್ವಾಮಿ ಭೇಟಿ ನೀಡಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ  ಕುಮಾರಸ್ವಾಮಿ, ದೇವರ ಅನುಗ್ರಹ, ಹೆತ್ತವರ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ. ನಾನು ಹುಟ್ಟಿ ಬೆಳೆದ ಲಕ್ಷ್ಮಿ ನರಸಿಂಹ ಸ್ವಾಮಿ,...Kannada News Portal