ಬೆಂಗಳೂರು : ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣಗಳ ನಿರ್ವಹಣಾ ವಿಭಾಗದಲ್ಲಿದ್ದ ಚಿರಾಗ್ ಪಟ್ನಾಯಕ್ ವಿರುದ್ಧ ದೆಹಲಿಯ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದಾರೆ.

ಎಐಸಿಸಿ ಸಾಮಾಜಿಕ ಜಾಲ ತಾಣ ಹಾಗೂ ಡಿಜಿಟಲ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರ ತಂಡದ ಪ್ರಮುಖ ಸದಸ್ಯ ಚಿರಾಗ್ ಪಟ್ನಾಯಕ್ ಗೆ ಮತ್ತೆ ಸಂಕಟ ಶುರುವಾಗಿದೆ. ಮಾಜಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಹೊತ್ತು, ಬಂಧಿತರಾಗಿದ್ದ ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣಗಳ ದೆಹಲಿ ಘಟಕದ ಸಿಬ್ಬಂದಿಗೆ ಜಾಮೀನು ಸಿಕ್ಕಿತ್ತು.

ಈ ಬಗ್ಗೆ ಟ್ವೀಟ್ ಮಾಡಿದ್ದ ರಮ್ಯಾ, ಮಾಜಿ ಉದ್ಯೋಗಿ ಅವರ ಮೇಲಿನ ಆಪಾದನೆ ಬಗ್ಗೆ ಕಾಂಗ್ರೆಸ್ ಆಂತರಿಕವಾಗಿ ತನಿಖೆ ಕೈಗೊಳ್ಳಲಾಗಿದೆ. ಈ ಬಗ್ಗೆ ಸಮಿತಿಯನ್ನು ರಚಿಸಲಾಗಿದ್ದು, ದೂರಿನ ಅಂಶಗಳನ್ನು ಪರಿಗಣಿಸಿ, ಪಾರದರ್ಶಕ ತನಿಖೆ ನಡೆಸಲಾಗುತ್ತದೆ ಎಂದಿದ್ದರು.

ಆದರೆ, ಈಗ ದೆಹಲಿ ಪೊಲೀಸರು, ಚಿರಾಗ್ ವಿರುದ್ಧ ಪಟಿಯಾಲ್ ಕೋರ್ಟಿನಲ್ಲಿ ದೋಷಾರೋಪಣ ಪಟ್ಟಿ ದಾಖಲಿಸಿದ್ದಾರೆ. “ಸಂತ್ರಸ್ತ ಯುವತಿ ಲೈಂಗಿಕ ಕಿರುಕುಳದ ಬಗ್ಗೆ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರಿಗೆ ದೂರು ನೀಡಿದ್ದರೂ, ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ,” ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

Please follow and like us:
0
http://bp9news.com/wp-content/uploads/2018/10/ramya_20160823_630_630.jpghttp://bp9news.com/wp-content/uploads/2018/10/ramya_20160823_630_630-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯSexual Harassment: Charging Against Ramachandran's Charge Sheetಬೆಂಗಳೂರು : ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣಗಳ ನಿರ್ವಹಣಾ ವಿಭಾಗದಲ್ಲಿದ್ದ ಚಿರಾಗ್ ಪಟ್ನಾಯಕ್ ವಿರುದ್ಧ ದೆಹಲಿಯ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಎಐಸಿಸಿ ಸಾಮಾಜಿಕ ಜಾಲ ತಾಣ ಹಾಗೂ ಡಿಜಿಟಲ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥೆ, ಮಾಜಿ...Kannada News Portal