ಬೆಂಗಳೂರು : ಐದು ವರ್ಷ ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡಿತ್ತು. ಜನ ಮತ್ತೆ ನಮ್ಮನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಬಿಜೆಪಿಯ ಅಪಪ್ರಚಾರದಿಂದ ಅದು ಸಾಧ್ಯವಾಗಲಿಲ್ಲ. ಬಿಜೆಪಿಯವರು 30 ಜನ ಮತದಾರರಿಗೆ ಒಬ್ಬ ಕಾರ್ಯಕರ್ತನನ್ನು ನೇಮಿಸಿ ಕಾಂಗ್ರೆಸ್ ವಿರುದ್ಧ ಹಾಗೂ ಹಿಂದುತ್ವದ ಕುರಿತು ಮನೆಮನೆಗೆ ಹೋಗಿ ಸುಳ್ಳು ಪ್ರಚಾರಗಳನ್ನು ಮಾಡಿದರು. ಈ ಅಪಪ್ರಚಾರಕ್ಕೆ ಪ್ರತಿಯಾಗಿ ಸತ್ಯ ಹೇಳಿ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ವಿಫಲವಾಯಿತು. ಇದಕ್ಕೆ ನಾನು ಯಾರನ್ನು ಹೊಣೆ ಮಾಡುವುದಿಲ್ಲ ಎಂದು ನಗರದ ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ಅಪಪ್ರಚಾರಕ್ಕೆ ಕಾಂಗ್ರೆಸ್​ನಿಂದ ತಕ್ಕ ಪ್ರತ್ಯುತ್ತರ ನೀಡಲು ಸಾಧ್ಯವಾಗದೆ ಇರುವುದೇ ನಮ್ಮ ಸೋಲಿಗೆ ಕಾರಣ.

ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ನಡವಳಿಕೆಗೆ ಅವಕಾಶ ನೀಡಬಾರದು. ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ಐದು ವರ್ಷ ಕಾಂಗ್ರೆಸ್ ಆಡಳಿತವನ್ನು ಜನ ಮತ್ತೆ ನೆನೆಪಿಸಿಕೊಳ್ಳುತ್ತಾರೆ. ನಮಗೆ ಅವಕಾಶ ಕೊಟ್ಟೇ ಕೊಡುತ್ತಾರೆ. 28 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಬೇಕು. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೂತನ ಅಧ್ಯಕ್ಷರಾದ ದಿನೇಶ್​​ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರಿಗೆ ಎಲ್ಲಾ ರೀತಿಯ ಸಹಕಾರ, ಬೆಂಬಲ ನೀಡಬೇಕು ಎಂದು ಹೇಳಿದರು.

ರಾಹುಲ್​​ ಗಾಂಧಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿಯಾಗಿದ್ದ ನನ್ನ ಮೇಲೆ ಭಾರೀ ವಿಶ್ವಾಸವಿಟ್ಟಿದ್ದರು, ಚುನಾವಣೆ ಜವಾಬ್ದಾರಿ ನೀಡಿದ್ದರು. ಆದರೆ ನಾವು ನಿರೀಕ್ಷೆಯಷ್ಟು ಸ್ಥಾನಗಳನ್ನು ಗೆಲ್ಲ್ಲಲಿಲ್ಲ. ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರಲಿಲ್ಲ. ಅನಿವಾರ್ಯವಾಗಿ ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಹೇಳಿದರು.

Please follow and like us:
0
http://bp9news.com/wp-content/uploads/2018/07/Siddaramaiah-01-1-1.jpghttp://bp9news.com/wp-content/uploads/2018/07/Siddaramaiah-01-1-1-150x150.jpgPolitical Bureauಪ್ರಮುಖರಾಜಕೀಯSiddaramaiah searches for his defeat This is not the case in the Lok Sabha elections: Siddaramaiahಬೆಂಗಳೂರು : ಐದು ವರ್ಷ ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡಿತ್ತು. ಜನ ಮತ್ತೆ ನಮ್ಮನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಬಿಜೆಪಿಯ ಅಪಪ್ರಚಾರದಿಂದ ಅದು ಸಾಧ್ಯವಾಗಲಿಲ್ಲ. ಬಿಜೆಪಿಯವರು 30 ಜನ ಮತದಾರರಿಗೆ ಒಬ್ಬ ಕಾರ್ಯಕರ್ತನನ್ನು ನೇಮಿಸಿ ಕಾಂಗ್ರೆಸ್ ವಿರುದ್ಧ ಹಾಗೂ ಹಿಂದುತ್ವದ ಕುರಿತು ಮನೆಮನೆಗೆ ಹೋಗಿ ಸುಳ್ಳು ಪ್ರಚಾರಗಳನ್ನು ಮಾಡಿದರು. ಈ ಅಪಪ್ರಚಾರಕ್ಕೆ ಪ್ರತಿಯಾಗಿ ಸತ್ಯ ಹೇಳಿ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಕಾಂಗ್ರೆಸ್ ವಿಫಲವಾಯಿತು. ಇದಕ್ಕೆ ನಾನು...Kannada News Portal