ನವದೆಹಲಿ : ತಲೆಗೆ ಸ್ಕಾರ್ಫ್ ಧರಿಸಿಕೊಂಡು ಚೆಸ್ ಆಡಬೇಕೆಂಬ ಇರಾನ್ ದೇಶದ ಕಾನೂನನ್ನು ಧಿಕ್ಕರಿಸಿ ಭಾರತದ ಚೆಸ್‌ ಪ್ರತಿಭೆ ಸೌಮ್ಯಾ ಸ್ವಾಮಿನಾಥನ್ ಚೆಸ್‌ ಟೂರ್ನಿಯಿಂದ ಹೊರಬಂದಿದ್ದಾರೆ.ಇರಾನ್‌ನ ಹಮದಾನ್‌ನಲ್ಲಿ ಜೂನ್ 26ರಿಂದ ಆಗಸ್ಟ್ 4ರವರೆಗೆ ಚೆಸ್ ಚಾಂಪಿಯನ್‌ಷಿಪ್‌ ನಡೆಯಲಿದೆ.

ಇರಾನ್‌ ಕಾನೂನಿನ ಪ್ರಕಾರ ಮಹಿಳೆಯರು ತಲೆಗೆ ಸ್ಕಾರ್ಫ್ ಕಟ್ಟಿಕೊಳ್ಳಬೇಕಿರುವುದು ಕಡ್ಡಾಯವಾಗಿರುವುದರಿಂದ ಅದು ತಮ್ಮ ವೈಯಕ್ತಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಕಾರಣದಿಂದ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸೌಮ್ಯಾ ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಬರೆದಿರುವ ಸೌಮ್ಯಾ, ಮಹಿಳೆಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ಇರಾನ್‌ನ ಕಾನೂನು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ, ಚಿಂತನೆ, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳು ಸೇರಿದಂತೆ ನನ್ನ ಮಾನವ ಹಕ್ಕುಗಳನ್ನು ನೇರವಾಗಿ ಹತ್ತಿಕ್ಕುತ್ತದೆ.

ಪ್ರಸ್ತುತದ ಸಂದರ್ಭದಲ್ಲಿ ನನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ನಾನು ಇರಾನ್‌ಗೆ ತೆರಳದೆ ಇರುವುದೇ ಸೂಕ್ತ ಎನಿಸಿದೆ ಎಂದು ಹೇಳಿದ್ದಾರೆ. ಕ್ರೀಡಾಪಟುಗಳ ಮೇಲೆ ಧಾರ್ಮಿಕ ವಸ್ತ್ರಸಂಹಿತೆಯನ್ನು ಹೇರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಧಿಕೃತ ಚಾಂಪಿಯನ್‌ಷಿಪ್‌ಗಳಲ್ಲಿ ನಾವು ರಾಷ್ಟ್ರೀಯ ತಂಡದ ದಿರಿಸು ಅಥವಾ ಕ್ರೀಡಾ ಉಡುಪನ್ನು ಧರಿಸಿರುವುದನ್ನು ಆಯೋಜಕರು ನಿರೀಕ್ಷಿಸುತ್ತಾರೆ. ಆದರೆ, ಕ್ರೀಡೆಯಲ್ಲಿ ಧಾರ್ಮಿಕ ವಸ್ತ್ರಸಂಹಿತೆಯನ್ನು ಬಲವಂತವಾಗಿ ಹೇರುವಂತಿಲ್ಲ ಎಂದಿದ್ದಾರೆ.

Please follow and like us:
0
http://bp9news.com/wp-content/uploads/2018/06/35282766_1756099634445401_415057461867708416_n.jpghttp://bp9news.com/wp-content/uploads/2018/06/35282766_1756099634445401_415057461867708416_n-150x150.jpgBP9 Bureauಪ್ರಮುಖರಾಷ್ಟ್ರೀಯನವದೆಹಲಿ : ತಲೆಗೆ ಸ್ಕಾರ್ಫ್ ಧರಿಸಿಕೊಂಡು ಚೆಸ್ ಆಡಬೇಕೆಂಬ ಇರಾನ್ ದೇಶದ ಕಾನೂನನ್ನು ಧಿಕ್ಕರಿಸಿ ಭಾರತದ ಚೆಸ್‌ ಪ್ರತಿಭೆ ಸೌಮ್ಯಾ ಸ್ವಾಮಿನಾಥನ್ ಚೆಸ್‌ ಟೂರ್ನಿಯಿಂದ ಹೊರಬಂದಿದ್ದಾರೆ.ಇರಾನ್‌ನ ಹಮದಾನ್‌ನಲ್ಲಿ ಜೂನ್ 26ರಿಂದ ಆಗಸ್ಟ್ 4ರವರೆಗೆ ಚೆಸ್ ಚಾಂಪಿಯನ್‌ಷಿಪ್‌ ನಡೆಯಲಿದೆ. ಇರಾನ್‌ ಕಾನೂನಿನ ಪ್ರಕಾರ ಮಹಿಳೆಯರು ತಲೆಗೆ ಸ್ಕಾರ್ಫ್ ಕಟ್ಟಿಕೊಳ್ಳಬೇಕಿರುವುದು ಕಡ್ಡಾಯವಾಗಿರುವುದರಿಂದ ಅದು ತಮ್ಮ ವೈಯಕ್ತಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಕಾರಣದಿಂದ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸೌಮ್ಯಾ ಹೇಳಿದ್ದಾರೆ. var domain = (window.location...Kannada News Portal