ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆಸ್ಟ್ರೇಲಿಯಾ ದ ಗೋಲ್ಡ್ ಕೋಸ್ಟ್ ನಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಧ್ವರಾಜ್ ಅವರು, ಗುರುರಾಜ್ ಗೆ ಕ್ರೀಡಾ ಇಲಾಖೆ 25 ಲಕ್ಷ ರೂ.ಗಳ ನಗದು ಮತ್ತು ಸರ್ಕಾರಿ ನೌಕರಿಯನ್ನು ರಾಜ್ಯ ಸರ್ಕಾರ ನೀಡುತ್ತದೆ ಎಂದು ಹೇಳಿದ್ದರು.

ಆದರೆ ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಸರಿಯಲ್ಲ, ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ. ಕ್ರೀಡಾ ನೀತಿಯ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಾಗಿ ಮತದಾನ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಮತದಾರರನ್ನು ಓಲೈಸುವಂತಾಗುತ್ತದೆ ಅಲ್ಲದೇ ಆಮಿಷ ಒಡ್ಡುವಂತಾಗುತ್ತದೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ಉಡುಪಿ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲು ಮಾಡಿದ್ದಾರೆ.

Please follow and like us:
0
http://bp9news.com/wp-content/uploads/2018/04/ಮಧ್ವರಾಜ್_-1024x768.jpghttp://bp9news.com/wp-content/uploads/2018/04/ಮಧ್ವರಾಜ್_-150x150.jpgPolitical Bureauಉಡುಪಿಪ್ರಮುಖರಾಜಕೀಯSports minister Pramod Madhwaraj against FIR !!! : A great sportsman is wrongಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆಸ್ಟ್ರೇಲಿಯಾ ದ ಗೋಲ್ಡ್ ಕೋಸ್ಟ್ ನಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಧ್ವರಾಜ್ ಅವರು, ಗುರುರಾಜ್ ಗೆ ಕ್ರೀಡಾ ಇಲಾಖೆ 25 ಲಕ್ಷ ರೂ.ಗಳ ನಗದು ಮತ್ತು ಸರ್ಕಾರಿ ನೌಕರಿಯನ್ನು ರಾಜ್ಯ...Kannada News Portal