ತುರುವೇಕೆರೆ: ಕಾಂಗ್ರೆಸ್ ಅಭ್ಯರ್ಥಿ ರಂಗಪ್ಪ ಟಿ ಚೌದ್ರಿ, ಮುಖಂಡ ಮಂಜುನಾಥ ಅದ್ದೆ ನೇತೃತ್ವದಲ್ಲಿ ಸೊರವನಹಳ್ಳಿ, ದಾಸೀಹಳ್ಳಿ ಗ್ರಾಮದ ೫೦ಕ್ಕೂ ಅಧಿಕ ಮಂದಿ ಯುವಕರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆಯಾದ ಯುವಕರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಕಾಂಗ್ರೆಸ್ ಅಭ್ಯರ್ಥಿ ರಂಗಪ್ಪ ಟಿ ಚೌದ್ರಿ ಮಾತನಾಡಿ, ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆ, ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ವಿವಿಧ ಪಕ್ಷದವರು ಸ್ವಯಂಪ್ರೇರಿತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಕಳೆದ ೫ ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಆದರೆ ನಮ್ಮ ತುರುವೇಕೆರೆ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಕ್ಷೇತ್ರದ ಮತದಾರರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಸೊರವನಹಳ್ಳಿ ಕಾಲೋನಿಯ ಮಂಜು, ಪರಮೇಶ್, ಮೂರ್ತಿ, ಮಧು, ತಿಮ್ಮಯ್ಯ, ಸಣ್ಣ ನರಸಯ್ಯ, ಗಂಗಾಧರ್, ಮಂಜುನಾಥ್, ದಾಸೀಹಳ್ಳಿಯ ವೆಂಕಟೇಶ್ವರ, ಸಲ್ಮಾನ್, ಸದ್ದಾಂ, ಶ್ರೀಧರ್, ಚೇತನ್, ಮಧು, ರಾಮಣ್ಣ, ಗಿರೀಶ್, ಸಾದಿಕ್ ಪಾಷ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಅದ್ದೆ, ಮುಖಂಡರಾದ ಜವರೇಗೌಡ, ರಂಗಸ್ವಾಮಿ, ಗಿರೀಶ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ

Please follow and like us:
0
http://bp9news.com/wp-content/uploads/2018/05/WhatsApp-Image-2018-05-07-at-4.53.16-PM.jpeghttp://bp9news.com/wp-content/uploads/2018/05/WhatsApp-Image-2018-05-07-at-4.53.16-PM-150x150.jpegBP9 Bureauತುಮಕೂರುಪ್ರಮುಖತುರುವೇಕೆರೆ: ಕಾಂಗ್ರೆಸ್ ಅಭ್ಯರ್ಥಿ ರಂಗಪ್ಪ ಟಿ ಚೌದ್ರಿ, ಮುಖಂಡ ಮಂಜುನಾಥ ಅದ್ದೆ ನೇತೃತ್ವದಲ್ಲಿ ಸೊರವನಹಳ್ಳಿ, ದಾಸೀಹಳ್ಳಿ ಗ್ರಾಮದ ೫೦ಕ್ಕೂ ಅಧಿಕ ಮಂದಿ ಯುವಕರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಯುವಕರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ರಂಗಪ್ಪ ಟಿ ಚೌದ್ರಿ ಮಾತನಾಡಿ, ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಮಾಡಿದ...Kannada News Portal