ಬೆಂಗಳೂರು : ಸಚಿವ ಸ್ಥಾನ ಸಿಗದೆ ಕುದಿಯುತ್ತಿರುವ ಶಾಸಕರನ್ನು ಸಮಾಧಾನಪಡಿಸಲು ಕಾಂಗ್ರೆಸ್‌ ಸಮನ್ವಯ ಸೂತ್ರ ಸಿದ್ಧಪಡಿಸಿದೆ. ಮೂವರು ಸಚಿವರನ್ನು ಕೈಬಿಟ್ಟು ಅತೃಪ್ತರಿಗೆ ಅವಕಾಶ ಮಾಡಿಕೊಡುವುದಾಗಿ ಆಲೋಚಿಸಲಾಗಿದೆ.

ಕಾಂಗ್ರೆಸ್‌ ಕೋಟಾದಲ್ಲಿ ಆರು ಸಚಿವ ಸ್ಥಾನಗಳು ಖಾಲಿ ಇವೆ. ಆಕಾಂಕ್ಷಿಗಳ ಸಂಖ್ಯೆ 20ಕ್ಕೂ ಅಧಿಕ ಇದೆ. ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಜೇನುಗೂಡಿಗೆ ಕಲ್ಲು ಬಿಸಾಡಿದಂತಾಗುತ್ತದೆ ಎಂಬುದು ಕೈಪಾಳಯದ ಹಿರಿಯ ನಾಯಕರಿಗೂ ಗೊತ್ತು. ಅಕ್ಟೋಬರ್‌ 10ರೊಳಗೆ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಬಗ್ಗೆ ಗಂಭೀರ ಚಿಂತನೆ ನಡೆದಿದೆ.

ಎಂ.ಟಿ.ಬಿ ನಾಗರಾಜ್‌, ಇ. ತುಕಾರಾಂ ಅಥವಾ ಬಿ.ನಾಗೇಂದ್ರ, ಎಂ.ಬಿ.ಪಾಟೀಲ, ರಾಮಲಿಂಗಾ ರೆಡ್ಡಿ ಇವರುಗಳು ಸಂಪುಟಕ್ಕೆ ಸೇರುವವರ ಪಟ್ಟಿಯಲ್ಲಿ ಇದ್ದಾರೆ. ಸಂಪುಟದಿಂದ ಯಾರನ್ನು ಕೈಬಿಡಲಾಗುತ್ತದೆ ಎಂಬುದು ಸದ್ಯಕ್ಕೆ ನಿರ್ಧಾರವಾಗಿಲ್ಲ.

ವಿಧಾನಸಭೆ ಚುನಾವಣೆ ವೇಳೆ ಪಕ್ಷಕ್ಕೆ ಬಂದ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಕ್ಕೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ತುಕಾರಾಂ ಹಾಗೂ ಭೀಮಾನಾಯ್ಕ ವಿರೋಧ ವ್ಯಕ್ತಪಡಿಸಿದ್ದಾರೆ.

Please follow and like us:
0
http://bp9news.com/wp-content/uploads/2018/05/1200px-Flag_of_the_Indian_National_Congress.svg_-1024x682.pnghttp://bp9news.com/wp-content/uploads/2018/05/1200px-Flag_of_the_Indian_National_Congress.svg_-150x150.pngPolitical Bureauಪ್ರಮುಖರಾಜಕೀಯThe decision to drop three ministers is ready for co-ordinationಬೆಂಗಳೂರು : ಸಚಿವ ಸ್ಥಾನ ಸಿಗದೆ ಕುದಿಯುತ್ತಿರುವ ಶಾಸಕರನ್ನು ಸಮಾಧಾನಪಡಿಸಲು ಕಾಂಗ್ರೆಸ್‌ ಸಮನ್ವಯ ಸೂತ್ರ ಸಿದ್ಧಪಡಿಸಿದೆ. ಮೂವರು ಸಚಿವರನ್ನು ಕೈಬಿಟ್ಟು ಅತೃಪ್ತರಿಗೆ ಅವಕಾಶ ಮಾಡಿಕೊಡುವುದಾಗಿ ಆಲೋಚಿಸಲಾಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಕಾಂಗ್ರೆಸ್‌ ಕೋಟಾದಲ್ಲಿ ಆರು ಸಚಿವ ಸ್ಥಾನಗಳು ಖಾಲಿ ಇವೆ....Kannada News Portal