ಬೆಂಗಳೂರು: ‘ಕೈ’ ಪಾಳಯದ ಬಿಕ್ಕಟ್ಟು ಶಮನಗೊಳಿಸಲು ಹಾಗೂ ಅತೃಪ್ತ ಬಣಗಳ ಒಗ್ಗಟ್ಟು ಮುರಿಯುವ ಸಲುವಾಗಿ ನಿಗಮ ಮಂಡಳಿಗಳಲ್ಲಿ ಶಾಸಕರಿಗೇ ಮೊದಲ ಪ್ರಾತಿನಿಧ್ಯ ನೀಡಲು ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ‘ಸಮನ್ವಯ ಸಮಿತಿ’ ಸಭೆಯಲ್ಲಿ ನಿರ್ಧರಿಸಿದೆ.

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್‌ ಅಲಿ ಸುಮಾರು ಒಂದೂವರೆ ಗಂಟೆ ಚರ್ಚಿಸಿದರು. ಕಾಂಗ್ರೆಸ್‌ ಪಾಳಯದ ಭಿನ್ನಮತ ಚಟುವಟಿಕೆಯೇ ಚರ್ಚೆಯ ಪ್ರಧಾನ ವಿಷಯವಾಗಿತ್ತು. ಇದಕ್ಕೂ ಮುನ್ನ, ವೇಣುಗೋಪಾಲ್‌ ಅವರು ದಿನವಿಡೀ ಅತೃಪ್ತ ಶಾಸಕರ ಅಹವಾಲು ಆಲಿಸಿದ್ದರು.

‘ಎಂ.ಬಿ.ಪಾಟೀಲ ಹಾಗೂ ಸತೀಶ ಜಾರಕಿಹೊಳಿ ನೇತೃತ್ವದ ಅತೃಪ್ತರ ಗುಂಪಿನಲ್ಲಿ ಸುಮಾರು 20 ಶಾಸಕರು ಗುರುತಿಸಿಕೊಂಡಿದ್ದಾರೆ. ಅವರಲ್ಲಿ ಕೆಲವರು ನಿತ್ಯವೂ ಪಕ್ಷಕ್ಕೆ ಮುಜುಗರ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ. ದೋಸ್ತಿ ಸರ್ಕಾರ ರಚನೆಯಾಗಿ 25 ದಿನ ಕಳೆದರೂ ಟೇಕಾಫ್‌ ಆಗಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಸಬೇಕು. ಅತೃಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕರ ಒಗ್ಗಟ್ಟು ಮುರಿದು ನೇತೃತ್ವ ವಹಿಸಿಕೊಂಡವರನ್ನು ಏಕಾಂಗಿಗಳನ್ನಾಗಿ ಮಾಡಬೇಕು. ಇದಕ್ಕೆ ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಪ್ರಾತಿನಿಧ್ಯ ನೀಡುವುದೇ ಮಾರ್ಗ’ ಎಂಬ ತೀರ್ಮಾನಕ್ಕೆ ಸಭೆ ಬಂದಿತು.

ನಿಗಮ ಮಂಡಳಿಗಳ ಸ್ಥಾನಗಳಲ್ಲಿ ಮೂರನೇ ಎರಡು ಭಾಗ ಕಾಂಗ್ರೆಸ್‌ ಹಾಗೂ ಮೂರನೇ ಒಂದು ಭಾಗ ಜೆಡಿಎಸ್‌ ಪಾಲಾಗಲಿದೆ. 2016ರಲ್ಲಿ 21 ನಿಗಮ–ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಕ್ಷದಲ್ಲಿನ ಅಸಮಾಧಾನವನ್ನು ಶಮನಗೊಳಿಸಿತ್ತು.

‘ವಾರದೊಳಗೆ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುತ್ತಿದೆ. ಅದರಲ್ಲಿ ಶಾಸಕರಿಗೆ ಆದ್ಯತೆ ನೀಡುತ್ತೇವೆ. ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಕುಮಾರಸ್ವಾಮಿ ಹಾಗೂ ಪರಮೇಶ್ವರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ’ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

Please follow and like us:
0
http://bp9news.com/wp-content/uploads/2018/06/dc-Cover-d69qrn0j1vvjp3s42qkql8ddu0-20170706061944.Medi_.jpeghttp://bp9news.com/wp-content/uploads/2018/06/dc-Cover-d69qrn0j1vvjp3s42qkql8ddu0-20170706061944.Medi_-150x150.jpegPolitical Bureauಪ್ರಮುಖರಾಜಕೀಯThe first formula for coordination is 'ready': 'hand' disaster relief !!!  ಬೆಂಗಳೂರು: ‘ಕೈ’ ಪಾಳಯದ ಬಿಕ್ಕಟ್ಟು ಶಮನಗೊಳಿಸಲು ಹಾಗೂ ಅತೃಪ್ತ ಬಣಗಳ ಒಗ್ಗಟ್ಟು ಮುರಿಯುವ ಸಲುವಾಗಿ ನಿಗಮ ಮಂಡಳಿಗಳಲ್ಲಿ ಶಾಸಕರಿಗೇ ಮೊದಲ ಪ್ರಾತಿನಿಧ್ಯ ನೀಡಲು ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ‘ಸಮನ್ವಯ ಸಮಿತಿ’ ಸಭೆಯಲ್ಲಿ ನಿರ್ಧರಿಸಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್‌ ಅಲಿ ಸುಮಾರು ಒಂದೂವರೆ ಗಂಟೆ ಚರ್ಚಿಸಿದರು. ಕಾಂಗ್ರೆಸ್‌...Kannada News Portal