ಬೆಂಗಳೂರು:ದೋಸ್ತಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಈ ಸಮಯದಲ್ಲಿ ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಶಾಸಕರಿಗೆ ಸಮಾಧಾನ ಪಡಿಸುವ ಸೂತ್ರ ರಚಿಸಲು ತಯಾರಿ ನಡೆದಿದೆ.

ಸಮಿತಿಯಲ್ಲಿ ಭಿನ್ನಮತೀಯ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡುವುದು ಹಾಗೂ ಖಾಲಿ ಇರುವ ಸಚಿವ ಸ್ಥಾನಗಳನ್ನ ಯಾರು ಯಾರಿಗೆ ಕೊಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಮಿತಿ ಸದಸ್ಯರಾಗಿರುವ ಹಾಲಿ ಸಿಎಂ ಎಚ್. ಡಿ.ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ , ಸಂಚಾಲಕ ಡ್ಯಾನಿಷ್ ಆಲಿ  ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಈಗಾಗಲೆ ಸಮಿತಿ ಸದಸ್ಯರಿಗೆ ನಡಾವಳಿಯ ಪತ್ರವನ್ನ ರವಾನಿಸಲಾಗಿದ್ದು, ಗುರುವಾರ ನಡೆಯುವ ಈ ಸಭೆಯಲ್ಲಿ ಮೈತ್ರಿ ಸರ್ಕಾರದ ಆಡಳಿತಾವಧಿಗೆ  ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಜಂಟಿ ಕಾರ್ಯಕ್ರಮಗಳನ್ನ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.

 

 

Please follow and like us:
0
http://bp9news.com/wp-content/uploads/2018/06/es-image-4.jpghttp://bp9news.com/wp-content/uploads/2018/06/es-image-4-150x150.jpgBP9 Bureauಪ್ರಮುಖಬೆಂಗಳೂರು:ದೋಸ್ತಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ ಗುರುವಾರ ನಡೆಯಲಿದ್ದು, ಈ ಸಮಯದಲ್ಲಿ ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಶಾಸಕರಿಗೆ ಸಮಾಧಾನ ಪಡಿಸುವ ಸೂತ್ರ ರಚಿಸಲು ತಯಾರಿ ನಡೆದಿದೆ. ಸಮಿತಿಯಲ್ಲಿ ಭಿನ್ನಮತೀಯ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡುವುದು ಹಾಗೂ ಖಾಲಿ ಇರುವ ಸಚಿವ ಸ್ಥಾನಗಳನ್ನ ಯಾರು ಯಾರಿಗೆ ಕೊಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಮಿತಿ ಸದಸ್ಯರಾಗಿರುವ ಹಾಲಿ...Kannada News Portal