ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಲೇ ಬಿಜೆಪಿಯಲ್ಲಿ ಅಸಮಾಧಾನ ಕಾಣಿಸಿಕೊಂಡಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಶ್ರೀರಾಮುಲುಗೆ ಟಿಕೆಟ್ ಘೋಷಿಸಿರುವುದಕ್ಕೆ ಹಾಲಿ ಶಾಸಕ ತಿಪ್ಪೇಸ್ವಾಮಿ ಮುನಿಸಿಕೊಂಡಿದ್ದಾರೆ.

ಇನ್ನು ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಅವರು ಇಂದು ಬೆಂಬಲಿಗರ ಸಭೆ ಕರೆದಿದ್ದು, ಅಲ್ಲಿ ತಮ್ಮ ಮುಂದಿನ ನಡೆ ಬಗ್ಗೆ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ನಿನ್ನೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಹಾಲಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನಿರಾಕರಿಸಲು ಶ್ರೀರಾಮುಲು ಅವರಿಗೆ ಅವಕಾಶ ನೀಡಲಾಗಿದೆ. ಇದು ತಿಪ್ಪೇಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನು ತಿಪ್ಪೇಸ್ವಾಮಿ ಅವರು ಬಿಎಸ್‌ಆರ್ ಪಕ್ಷದಿಂದ ತಿಪ್ಪೇಸ್ವಾಮಿ ಗೆದ್ದು ಬಂದಿದ್ದರು. ನಂತರ ಬಿಎಸ್ ಆರ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಿತ್ತು. ತಿಪ್ಪೇಸ್ವಾಮಿ ಅವರೂ ಬಿಜೆಪಿ ಸೇರಿದ್ದರು. ಹಾಗಾಗಿ ಬಿಜೆಪಿ ಟಿಕೆಟ್ ತಮಗೆ ಸಿಗುತ್ತದೆ ಎಂದು ತಿಪ್ಪೇಸ್ವಾಮಿ ನಂಬಿದ್ದರು. ಕೊನೆಯಲ್ಲಿ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರಿನಲ್ಲಿ ಅವಕಾಶ ಸಿಕ್ಕಿದೆ.

ಇದರಿಂದ ರೊಚ್ಚಿಗೆದ್ದಿರುವ ತಿಪ್ಪೇಸ್ವಾಮಿ ಬೆಂಬಲಿಗರು ಸಾಲು ಸಾಲು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ತಮ್ಮ ನೆಚ್ಚಿನ ನಾಯಕನಿಗೆ ಬಿಜೆಪಿ ಕೈ ಕೊಟ್ಟರು ತಿಪ್ಪೇಸ್ವಾಮಿಯವರು ಪಕ್ಷೇತರವಾಗಿ ಕಣಕ್ಕಿಳಿದು ರಾಮುಲುರವರಿಗೆ ಬುದ್ಧಿ ಕಲಿಸಲಿ ಎನ್ನುವ ನಿರ್ಧಾರವನ್ನು ಮಾಡಿದ್ದಾರೆ ಎನ್ನಲಾಗಿದೆ. ಇತ್ತ ರಾಮುಲು ಕೂಡ ನಾನು ಯಾರಿಗೂ ಹೆದರುವ ಪ್ರಶ್ನೆಯಿಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ. ತಿಪ್ಪೇಸ್ವಾಮಿಯವರು ನನ್ನ ಸೋದರ ಇದ್ದಂತೆ ನಾನು ಗೆದ್ದರೂ ಈ ಕ್ಷೇತ್ರದ ಶಾಸಕ ಅವರೇ. ಪಕ್ಷದಲ್ಲಿಯೂ ಅವರಿಗೆ ಸೂಕ್ತ ಸ್ಥಾನಮಾನ ನೀಡಿಸುವುದು ನನ್ನ ಜವಾಬ್ದಾರಿ ಎಂದಿದ್ದಾರೆ. ಈ ಮೂಲಕ ನಾನು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಶತಸಿದ್ಧ ಎಂದಿದ್ದಾರೆ.

Please follow and like us:
0
http://bp9news.com/wp-content/uploads/2018/04/sriramulu.jpg11.jpghttp://bp9news.com/wp-content/uploads/2018/04/sriramulu.jpg11-150x150.jpgPolitical Bureauಚಿತ್ರದುರ್ಗಪ್ರಮುಖರಾಜಕೀಯ"There is a lot of strikes yet,but there are three fields:" Sriramulu  ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಲೇ ಬಿಜೆಪಿಯಲ್ಲಿ ಅಸಮಾಧಾನ ಕಾಣಿಸಿಕೊಂಡಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಶ್ರೀರಾಮುಲುಗೆ ಟಿಕೆಟ್ ಘೋಷಿಸಿರುವುದಕ್ಕೆ ಹಾಲಿ ಶಾಸಕ ತಿಪ್ಪೇಸ್ವಾಮಿ ಮುನಿಸಿಕೊಂಡಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಅವರು ಇಂದು ಬೆಂಬಲಿಗರ ಸಭೆ ಕರೆದಿದ್ದು, ಅಲ್ಲಿ ತಮ್ಮ ಮುಂದಿನ ನಡೆ ಬಗ್ಗೆ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ನಿನ್ನೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಹಾಲಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್...Kannada News Portal