ಬೆಂಗಳೂರು: ‘ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕಮಿಷನ್‌ ಏಜೆಂಟ್‌ಗಳು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

‘ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕಾಮಗಾರಿಗಳಿಗೂ ಈಗ ಶೇ 8ರಿಂದ 10ರಷ್ಟು ಕಮಿಷನ್‌ ನೀಡಬೇಕು ಎಂದು ಈ ಸಚಿವರು ಒತ್ತಡ ಹೇರುತ್ತಿದ್ದಾರೆ. ಇಲ್ಲದಿದ್ದರೆ ಹಣ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇದೊಂದು ಕಮಿಷನ್‌ ಸರ್ಕಾರ’ ಎಂದು ಜರಿದರು.

‘ಎಚ್.ಡಿ.ರೇವಣ್ಣ ಭೂಕಬಳಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಎ.ಮಂಜು ಆರೋಪ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು.

‘ದೇವೇಗೌಡರ ಕುಟುಂಬದ ಭೂಕಬಳಿಕೆ ವಿರುದ್ಧ ಬಿಜೆಪಿ ಈ ಹಿಂದೆ ಪುಸ್ತಕವೊಂದನ್ನು ಪ್ರಕಟಿಸಿತ್ತು. ಗೌಡರ ಕುಟುಂಬ ಅನೇಕ ಹಗರಣಗಳಲ್ಲಿ ಭಾಗಿಯಾಗಿದೆ. ಅದರ ಬಗ್ಗೆಯೂ ಪಕ್ಷ ಬೆಳಕು ಚೆಲ್ಲಲಿದೆ’ ಎಂದರು.

‘ದೇವೇಗೌಡರ ಮಕ್ಕಳು ತಮ್ಮ ಮನಸ್ಸಿಗೆ ಬಂದಂತೆ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ. ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಬಳಿಕವೂ ವರ್ಗಾವಣೆ ಮಾಡಿದ್ದರು. ಈಗ ನಾಲ್ಕೈದು ದಿನಗಳಿಂದ ಪರಮೇಶ್ವರ ಮೌನಕ್ಕೆ ಶರಣಾಗಿದ್ದಾರೆ’ ಎಂದರು.

Please follow and like us:
0
http://bp9news.com/wp-content/uploads/2018/09/yeddyurappa.jpghttp://bp9news.com/wp-content/uploads/2018/09/yeddyurappa-150x150.jpgPolitical Bureauಪ್ರಮುಖರಾಜಕೀಯThese are the ministers of government agencies: BSYಬೆಂಗಳೂರು: ‘ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕಮಿಷನ್‌ ಏಜೆಂಟ್‌ಗಳು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ‘ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕಾಮಗಾರಿಗಳಿಗೂ ಈಗ ಶೇ 8ರಿಂದ 10ರಷ್ಟು ಕಮಿಷನ್‌ ನೀಡಬೇಕು ಎಂದು ಈ ಸಚಿವರು ಒತ್ತಡ ಹೇರುತ್ತಿದ್ದಾರೆ. ಇಲ್ಲದಿದ್ದರೆ ಹಣ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇದೊಂದು ಕಮಿಷನ್‌ ಸರ್ಕಾರ’ ಎಂದು ಜರಿದರು. var domain...Kannada News Portal