ತುಮಕೂರು: ತುಮಕೂರು ನಗರ ಬಿಜೆಪಿ ಅಭ್ಯರ್ಥಿ ಜಿ ಬಿ ಜ್ಯೋತಿಗಣೇಶ್ ನಗರದ ವಿವಿಧ ಬಡಾವಣೆಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

ನಗರದ ಕುವೆಂಪುನಗರ, ವಿದ್ಯಾನಗರ, ಶಾರದಾದೇವಿ ನಗರ, ಎನ್ ಆರ್ ಕಾಲೋನಿ ಭಾಗಗಳಲ್ಲಿ ಅಸಂಖ್ಯಾತ ಕಾರ್ಯಕರ್ತರೊಂದಿಗೆ  ರೋಡ್ ಷೋ ನಡೆಸಿ ಮತ ಯಾಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ.ಅದೇ ರೀತಿ ಕರ್ನಾಟಕದಲ್ಲಿಯೂ ಸಹ ಜನತೆ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಂಕಲ್ಪ ತೊಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಡಾ ಎಂ ಆರ್ ಹುಲಿನಾಯ್ಕರ್, ಕೊಪ್ಪಲ್​​ ನಾಗರಾಜು, ಬಿಜೆಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಾವಿಕಟ್ಟೆ ಗಣೇಶ್ ಹಾಗು ಇತರರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

Please follow and like us:
0
http://bp9news.com/wp-content/uploads/2018/05/Karnatakada-Miditha-32.jpeghttp://bp9news.com/wp-content/uploads/2018/05/Karnatakada-Miditha-32-150x150.jpegBP9 Bureauತುಮಕೂರುರಾಜಕೀಯತುಮಕೂರು: ತುಮಕೂರು ನಗರ ಬಿಜೆಪಿ ಅಭ್ಯರ್ಥಿ ಜಿ ಬಿ ಜ್ಯೋತಿಗಣೇಶ್ ನಗರದ ವಿವಿಧ ಬಡಾವಣೆಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ನಗರದ ಕುವೆಂಪುನಗರ, ವಿದ್ಯಾನಗರ, ಶಾರದಾದೇವಿ ನಗರ, ಎನ್ ಆರ್ ಕಾಲೋನಿ ಭಾಗಗಳಲ್ಲಿ ಅಸಂಖ್ಯಾತ ಕಾರ್ಯಕರ್ತರೊಂದಿಗೆ  ರೋಡ್ ಷೋ ನಡೆಸಿ ಮತ ಯಾಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ.ಅದೇ ರೀತಿ ಕರ್ನಾಟಕದಲ್ಲಿಯೂ ಸಹ ಜನತೆ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ...Kannada News Portal